ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಗಜೇಂದ್ರಗಡ ಪುರಸಭೆ ನಿರ್ಲಕ್ಷ್ಯ: ಸೌಲಭ್ಯ ಕೊರತೆ

Lingaraj Badiger
Updated On : 31 May 2014, 12:15 pm

ಗಜೇಂದ್ರಗಡ: ಸ್ಥಳೀಯ ಪುರಸಭೆ ಆಡಳಿತದ ನಿರ್ಲಕ್ಷ್ಯದಿಂದಾಗಿ ಜೈನ ಸಮುದಾಯ ವಾಸಿಸುವ ಬಡಾವಣೆ ಸಂಪರ್ಕಿಸುವ ಮುಖ್ಯ ರಸ್ತೆ ಹದಗೆಟ್ಟು ಬಿಡಾಡಿ ದನ, ಹಂದಿಗಳ ವಾಸಸ್ಥಾನವಾಗಿ ಪರಿಣಮಿಸಿದ್ದರಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ರಸ್ತೆ, ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
ಇನ್ನೊಂದೆಡೆ ಪಟ್ಟಣದ 23 ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ, ಕುಡಿವ ನೀರು ಸೇರಿದಂತೆ ಮೂಲ ಸೌಲಭ್ಯ ಕೊರತೆ ಎದುರಾಗಿ ಸಾರ್ವಜನಿಕರು ಸ್ಥಳೀಯ ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಕಲ್ಲುಗಳು ಕಿತ್ತ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಜತೆಗೆ ಚರಂಡಿಯಿಂದ ಹೊರಸೂಸುವ ಕಲ್ಮಷ ನೀರು ಸರಾಗವಾಗಿ ಹರಿಯದೇ ನಿಂತಲ್ಲೆ ನಿಂತ ಪರಿಣಾಮ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಸಾಂಕ್ರಮಿಕ ರೋಗಗಳು ಉತ್ಪತ್ತಿಯಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾದ್ಯತೆ ಇದೆ. ಇನ್ನೊಂದೆಡೆ ಹಂದಿಗಳು ಕಸವನ್ನು ಬೇಕಾಬಿಟ್ಟಿ ಚೆಲ್ಲಾಡಿ ಕಲುಷಿತ ವಾತಾವರಣ ಸೃಷ್ಟಿಯಾಗಿದೆ. ರಸ್ತೆ ದುರ್ನಾತ ಬೀರುತ್ತಿರುವ ದೃಶ್ಯ ಪುರಸಭೆಯವರಿಗೆ ಕಂಡರೂ ಕಾಣದಂತಿರುವುದು ಆಡಳಿತ ಅವ್ಯವಸ್ಥೆ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದರು.
ಸರ್ಕಾರ ಪೌರಾಡಳಿತ ಇಲಾಖೆಯಿಂದ ಪುರಸಭೆಗೆ ರು. ಕೋಟ್ಯಂತರ ಹಣ ಬಿಡುಗಡೆ ಮಾಡಿದೆ. ಜತೆಗೆ ವಿಪತ್ತು ನಿರ್ವಹಣಾ ಇಲಾಖೆಯಿಂದಲೂ ರು. ಲಕ್ಷಾಂತರ ಹಣ ಬಿಡುಗಡೆಗೊಳಿಸಿದರೂ ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆ ಮಾಡುವ ಬದಲು ಸ್ಥಳೀಯ ಆಡಳಿತ ಬೇಕಾಬಿಟ್ಟಿ ಆಡಳಿತ ನಡೆಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಡಳಿತದ ವಿರುದ್ಧ ಉಗ್ರ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement