ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅಂಬೇಡ್ಕರ್ ತತ್ವಾದರ್ಶ ಯುವಕರಿಗೆ ಮಾದರಿ

Lingaraj Badiger
Updated On : 15 Apr 2013, 12:19 pm

ಮುಂಡರಗಿ:  ಅಂಬೇಡ್ಕರ್ ಕೇವಲ ದಲಿತರಿಗಾಗಿ ಮಾತ್ರ ಹೋರಾಟ ಮಾಡಲಿಲ್ಲ. ಸಮಾಜದ ಎಲ್ಲ ವರ್ಗಗಳ ಒಳಿತಿಗಾಗಿ ತಮ್ಮ ಜೀವನ ಪರ್ಯಂತ ಸತತವಾಗಿ ಹೋರಾಟ ನಡೆಸಿ ಸಂವಿಧಾನವನ್ನು ರಚಿಸಿದರು. ಅವರ ತತ್ವಾದರ್ಶಗಳು ಇಂದಿನ ಯುವಕರಿಗೆ ಮಾದರಿಯಾಗಲಿ ಎಂದು ತಹಸೀಲ್ದಾರ್ ಡಿ.ಎಚ್.ನಾಯಕ ಹೇಳಿದರು.
ಅವರು ಭಾನುವಾರ ಸ್ಥಳೀಯ ಮಿನಿ ವಿಧಾನಸೌಧ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ 122ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ರಡ್ಡೇರ ಮಾತನಾಡಿ, ಅಂಬೇಡ್ಕರ್ ಸರ್ವಜನರ ಹಿತ ಬಯಸುವ ಸಂವಿಧಾನವನ್ನು ನೀಡಿದ್ದಾರೆ. ದಿನಕ್ಕೊಂದು ಹೊಸ ಪುಸ್ತಕವನ್ನು ಓದುವ ಹವ್ಯಾಸವನ್ನು ಅವರು ಹೊಂದಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಬೇಕು ಎಂದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಶಂಕರಗೌಡ ಮಾತನಾಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ವಿ. ತಿಗರಿಮಠ, ಎಪಿಎಂಸಿ ಕಾರ್ಯದರ್ಶಿ ಮರಿಬಸಪ್ಪ ಸಜ್ಜನರ, ಸಿಡಿಪಿಓ ಎಂ.ಎನ್. ನಾಯಕ, ಪುರಸಭೆ ಮುಖ್ಯಾಧಿಕಾರಿ ಆರ್.ಎಂ.ಪಾಟೀಲ, ಕೆ.ಎಸ್. ಲಮಾಣಿ, ಜಿಪಂ ಅಭಿಯಂತರ ಗಂಜೀಹಾಳ, ಜಿ.ಎಂ. ಕುಲಕರ್ಣಿ, ಆರ್.ಜಿ. ಬಾಲೇಹೊಸೂರ, ಬಿಚ್ಚಾಲೆ, ಬಡಿಗೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement