ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಎಚ್.ಕೆ. ಪಾಟೀಲನಾಮಪತ್ರ ಸಲ್ಲಿಕೆ

Lingaraj Badiger
Updated On : 15 Apr 2013, 12:11 pm

ಗದಗ: ಗದಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲ ಏ. 15ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ, ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಂತರ ಕೆ.ಎಚ್. ಪಾಟೀಲರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಪಾದಯಾತ್ರೆಯ ಮೂಲಕ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗಿರುವ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸುವರೆಂದು ಪ್ರಕಟಣೆ ತಿಳಿಸಿದೆ.
ಇಂದು ಜಿ.ಎಸ್. ಪಾಟೀಲ ನಾಮಪತ್ರ ಸಲ್ಲಿಕೆ
ರೋಣ: ರೋಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜಿ.ಎಸ್. ಪಾಟೀಲ ಏ. 15ರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುವರು. ರೋಣ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರೋಣ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಐ.ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಿಷಿಣದ ರಾಜಿನಾಮೆ
ಮುಂಡರಗಿ: ತಾಲೂಕು ಸಂಯುಕ್ತ ಜನತಾದಳ ಅಧ್ಯಕ್ಷ ಕುರುವತ್ತೆಪ್ಪ ಅರಿಷಿಣದ ತಮ್ಮ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯಾಧ್ಯಕ್ಷ ನಾಡಗೌಡ ಹಾಗೂ ಜಿಲ್ಲಾಧ್ಯಕ್ಷ ಬಸವರಾಜ ದೇಸಾಯಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement