ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿ ಅಧಿಕಾರಕ್ಕೆ: ಸಂಯುಕ್ತಾ ಬಂಡಿ

Lingaraj Badiger
Updated On : 15 Apr 2013, 12:20 pm

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಏ. 14
ಕಾಂಗ್ರೆಸ್ ಸರ್ಕಾರದಿಂದ ಆಗದಂತಹ ಜನಪರ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಸರ್ಕಾರ ಕೇವಲ 5 ವರ್ಷದಲ್ಲಿ ಮಾಡಿ ತೋರಿಸಿದೆ. ಆದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಜಯಭೇರಿ ಭಾರಿಸಲಿದೆ ಎಂದು ಮಹಿಳಾ ಮಂಡಳ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಅವರು ಈಚೆಗೆ ಪಟ್ಟಣದ ಕೆಳಗಲ ಪೇಟೆಯಲ್ಲಿ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಕೇವಲ ವೋಟ್ ಬ್ಯಾಂಕ್‌ಗಾಗಿ ಬಳಸಿಕೊಂಡ ಕಾಂಗ್ರೆಸ್ ಜನತೆಯ ಮತ ಕೇಳುವ ಹಕ್ಕು ಕಳೆದುಕೊಂಡಿದೆ. ಕಳೆದ 50 ವರ್ಷ ದೇಶದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ದೀನ-ದಲಿತರ ಏಳ್ಗೆ ಮರೆತು, ಜನಪರ ಕಾರ್ಯಗಳನ್ನು ಜಾರಿ ಮಾಡುವಲ್ಲಿ ವಿಫಲವಾಗಿ ಕೇವಲ ಕುಟುಂಬ ರಾಜಕಾರಣದಲ್ಲಿ ಮಿಂದೆದ್ದ ಪರಿಣಾಮ ರಾಜ್ಯದಲ್ಲಿ ದಲಿತರು, ಹಿಂದುಳಿದವರು, ಕೂಲಿ ಕಾರ್ಮಿಕರು ಮತ್ತಷ್ಟು ಹಿಂದೆ ಉಳಿಯುವಂತಾಯಿತು. ರಾಜ್ಯದಲ್ಲಿ ಕಳೆದ 4 ವರ್ಷ 8 ತಿಂಗಳು ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ರೋಣ ಮತಕ್ಷೇತ್ರ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಮಹತ್ತರ ಯೋಜನೆಗಳನ್ನು ಜಾರಿಗೊಳಿಸಿದೆ.
ಈ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು. ಕಾಂಗ್ರೆಸ್, ಜೆಡಿಎಸ್ ತೊರೆದ ಹಲವಾರು ಮುಖಂಡರು ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ನಗರ ಘಟಕ ಅಧ್ಯಕ್ಷ ಭಾಸ್ಕರ ರಾಯಬಾಗಿ, ಅಪ್ಪಣ್ಣ ಮಹೇಂದ್ರಕರ, ಟಿ.ವಿ. ರಾಯಬಾಗಿ, ಬಿ.ಎಂ. ಸಜ್ಜನ, ಪುರಸಭಾ ಸದಸ್ಯ ಚಂದ್ರಶೇಖರ ಚಳಗೇರಿ, ಪ್ರಭು ಚವಡಿ, ಅಶೋಕ ವನ್ನಾಲ, ಕವಿತಾ ಜಾಲಿಹಾಳ, ಪುಷ್ಪಾವತಿ ಭಾಂಡಗೆ, ದೀಪಾ ಗೋಯಲ, ಮಹಾಂತೇಶ ಶಿಗರಿ, ಶಂಕರ ಇಂಜನಿ, ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement