ಇಂದು ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಕೆ
ಮುಳಗುಂದ: ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏ. 17ರಂದು ಗದಗ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಂದಾನಯ್ಯ ಕುರ್ತಕೋಟಿಮಠ ನಾಮಪತ್ರ ಸಲ್ಲಿಸಲಿದ್ದಾರೆ. ಗದಗ ಜಿಲ್ಲಾ ಕಾರ್ಯಲಯದಿಂದ ಮೆರವಣಿಗೆಯಲ್ಲಿ ಹೊರಡಲಿದ್ದು, ಮುಳಗುಂದ, ಚಿಂಚಲಿ, ನೀಲಗುಂದ, ಕಲ್ಲೂರ, ಕಣವಿ, ಹೊಸುರ, ಯಲಿಶಿರುಂದ ಗ್ರಾಮಗಳ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ನಾಮಪತ್ರ ಸಲ್ಲಿಕೆ ಸಮಯದಲ್ಲಿ ಉಪಸ್ಥಿತರಿರುವಂತೆ ಮುಳಗುಂದ ಯುವ ಜೆಡಿಎಸ್ ಘಟಕದ ಅಧ್ಯಕ್ಷ ಮಹಾಂತೇಶ ಕಣವಿ, ಎ.ಬಿ.ಮಜ್ಜಿಗುಡ್ಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.