ಮತದಾನಕ್ಕೆ ಪರ್ಯಾಯ 23 ದಾಖಲೆಗಳು
ಗದಗ: ಚುನಾವಣಾ ಆಯೋಗ ಮೇ 5ರಂದು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ (ಎಪಿಕ್) ಇಲ್ಲದಿದ್ದರೆ ಪರ್ಯಾಯಲಾಗಿ ಆಯೋಗ ನಿಗದಿಪಡಿಸಿದ 23 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರು ಪಡಿಸಿ ಮತ ಚಲಾಯಿಸಬಹುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ದಾಖಲೆಗಳು ಇಂತಿವೆ: ಅಧಿಕೃತ ಮತದಾರರ ಭಾವಚಿತ್ರ ಸಹಿತ ಗುರುತಿನ ಚೀಟಿ, ಪಾಸ್ಪೋರ್ಟ್, ಡ್ರೈವಿಂಗ್ ಲೈಸನ್ಸ್, ಆದಾಯ ತೆರಿಗೆ ಗುರುತಿನ ಚೀಟಿ (ಪಾನ್ ಕಾರ್ಡ್) ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ಯಮಗಳು, ಸ್ಥಳೀಯ ಸಂಸ್ಥೆಗಳು ಅಥವಾ ಇತರೇ ಖಾಸಗಿ ಔದ್ಯಮಿಕ ಸಂಸ್ಥೆಗಳು ಉದ್ಯೋಗಿಗಳಿಗೆ ನೀಡಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ಔದ್ಯಮಿಕ ಬ್ಯಾಂಕ್, ಕಿಸಾನ್, ಅಂಚೆ ಕಚೇರಿಯ ಪಾಸ್ಪುಸ್ತಕ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡಿರುವ ಗುರುತಿನ ಚೀಟಿಗಳು, ನೋಂದಾಯಿತ ಡೀಡ್, ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು, ಪಡಿತರ ಚೀಟಿ, ಸಕ್ಷಮ ಪ್ರಾಧಿಕಾರ ನೀಡಿರುವ ಎಸ್ಸಿ, ಎಸ್ಟಿ, ಓಬಿಸಿ ಪ್ರಮಾಣ ಪತ್ರಗಳು, ಪಿಂಚಣಿ ಆದೇಶ, ವೃದ್ಧಾಪ್ಯ ವೇತನ, ವಿಧವಾ ವೇತನದ ಆದೇಶಗಳು, ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ, ಶಸ್ತ್ರ ಪರವಾನಿಗೆ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಗುರುತಿನ ಚೀಟಿ, ಮಾಜಿ ಯೋಧರ ಸಿಎಸ್ಡಿ ಕ್ಯಾಂಟೀನ್ ಕಾರ್ಡ್, ಮಾ. 31ರ ವರೆಗೆ ನೀಡಿರುವ ಸಂಧ್ಯಾ ಸುರಕ್ಷಾ ಯೋಜನೆಯ ಗುರುತಿನ ಚೀಟಿ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೀಡಿರುವ ಯಶಸ್ವಿನಿ ಕಾರ್ಡ್, ಸ್ಥಳೀಯ ಸಂಸ್ಥೆಗಳು ನೌಕರರು ನೀಡಿರುವ ಸೇವಾ ಗುರುತಿನ ಚೀಟಿಗಳು, ಸರ್ಕಾರಿ ಇಲಾಖೆ ನೀಡಿರುವ ಹಿರಿಯ ನಾಗರಿಕರ ಗುರುತಿನ ಚೀಟಿ, ಕಾರ್ಮಿಕ ಕಲ್ಯಾಣ ಮಂತ್ರಾಲಯ ನೀಡಿದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಎನ್ಪಿಆರ್ ಯೋಜನೆಯ ಅಡಿಯಲ್ಲಿ ನೀಡಲಾದ ಗುರುತುಪತ್ರ ಮತ್ತು ಆಧಾರ ಗುರುತಿನ ಚೀಟಿ ಇವುಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಆದರೆ, ಈ ಗುರುತಿನ ಚೀಟಿಗಳಲ್ಲಿ ಭಾವಚಿತ್ರ ಇರುವುದು ಕಡ್ಡಾಯ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.