ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ರಸ್ತೆ ಅಪಘಾತ: ಗಂಭೀರ ಗಾಯ

Rashmi Kasaragodu
Updated On : 20 Apr 2013, 11:08 am

ರೋಣ: ಇಂಡಿಕಾ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ತಾಲೂಕಿನ ಕಳಕಾಪುರ ಕ್ರಾಸ್(ಸೂಡಿ ರಸ್ತೆ) ಬಳಿ ಶುಕ್ರವಾರ ಜರುಗಿದೆ. ಗಾಯಗೊಂಡವರನ್ನು ರೋಣ ಪಟ್ಟಣದ ಯಾಕುಬ ಸಿದ್ದಿ ಪಟೇಲ್ (29) ಫಕ್ರುಸಾಬ ಕುರಹಟ್ಟಿ (28) ಎಂದು ಗುರುತಿಸಲಾಗಿದೆ. ಗಜೇಂದ್ರಗಡದಿಂದ ರೋಣಕ್ಕೆ ಬೈಕ್ನಲ್ಲಿ ಬರುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ನಲ್ಲಿದವರು ಕೆಳಗೆ ಬಿದ್ದಿದ್ದನ್ನು ಗಮನಿಸದೇ ಕಾರು ಅಲ್ಲಿಂದ ಪರಾರಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರನ್ನು ಪಟ್ಟಣದ ಡಾ. ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಗಂಭೀರ ಸ್ವರೂಪ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement