ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಾಂಗ್ರೆಸ್ ಗೆದ್ದರೆ ಎಲ್ಲ ನೀರಾವರಿ ಯೋಜನೆ ಪೂರ್ಣ: ಸಿದ್ದರಾಮಯ್ಯ

Vishwanath S
Updated On : 21 Apr 2013, 1:17 am

ಗದಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನೂ ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ರಾಜ್ಯದ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ನಮ್ಮ ಪಕ್ಷ ಸಂಕಲ್ಪ ಮಾಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿಂದ ಹಣ ಲೂಟಿ ಮಾಡುವುದರಲ್ಲೇ ಕಾಲ ಕಳೆದಿದೆ. ವರ್ಗಾವಣೆಯಲ್ಲೂ ಹಣ ಮಾಡಿರುವ ಬಿಜೆಪಿಯಿಂದ ಅಧಿಕಾರಿಗಳು ಬೇಸತ್ತು ಹೋಗಿದ್ದು, ಅವರೆಲ್ಲ ನಿರ್ಲಕ್ಷ್ಯ ಭಾವನೆಯಿಂದ ಕೆಲಸ ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಘ ಪರಿವಾರದವರು ಕಾನೂನು ಕೈಗೆ ತೆಗೆದುಕೊಂಡಿದ್ದು, ಹಿಂದುಳಿದ ವರ್ಗದವರಿಗೆ ಜೀವನ ನಡೆಸಲು ಕಷ್ಟವಾಗಿದೆ ಎಂದರು.
ಬಿಜೆಪಿ ಸರ್ಕಾರದ 20ಕ್ಕೂ ಹೆಚ್ಚಿನ ಸಚಿವರು, ಶಾಸಕರು ಜೈಲಿಗೆ ಹೋಗಿ ಬಂದಿರುವುದೇ ದೊಡ್ಡ ಸಾಧನೆ. ಯಡಿಯೂರಪ್ಪ ಜೈಲಿಗೆ ಹೋಗುವ ಮೂಲಕ ರಾಜ್ಯದಲ್ಲಿ ಒಂದು ದೊಡ್ಡ ಇತಿಹಾಸವನ್ನೇ ನಿರ್ಮಿಸಿದ್ದಾರೆ ಎಂದು ಟೀಕಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement