ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ದೇಶದ ಭವಿಷ್ಯ ತೂಗುಯ್ಯಾಲೆಯಲ್ಲಿ: ಬಸವರಾಜ ಬೊಮ್ಮಾಯಿ

Lingaraj Badiger
Updated On : 22 Apr 2013, 12:21 pm

ರಾಣಿಬೆನ್ನೂರು: ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ದುರ್ಬಲ ನಾಯಕತ್ವದಿಂದ ದೇಶದ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ದೇಶಭಕ್ತರಿಂದ ನಿರ್ಮಾಣವಾದ ಬಿಜೆಪಿಯನ್ನು ಪ್ರಸಕ್ತ ಚುನಾವಣೆಯಲ್ಲಿ ಬೆಂಬಲಿಸುವಂತೆ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ನಗರದ ಬಿ.ಟಿ. ಪಾಟೀಲ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ 2008ರಲ್ಲಿ ಜರುಗಿದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿನ ಶೇ. 70 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೇವೆ. ಉಚಿತ ವಿದ್ಯುತ್, ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ, ತುಂಗಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ 1 ಲಕ್ಷ ಹೆಕ್ಟೇರ್ ಕೃಷಿಭೂಮಿಗೆ ನೀರು, ನೀರಾವರಿಯ 27 ಯೋಜನೆಗಳನ್ನು ಪೂರ್ಣಗೊಳಿಸಿದ್ದು, 14 ಯೋಜನೆಗಳನ್ನು ಪ್ರಾರಂಭಿಸಿದೆ. ಕೇವಲ ರು. 37 ಸಾವಿರ ಕೋಟಿ ಬಜೆಟ್‌ನ್ನು ರು. 1.17 ಲಕ್ಷಗಳಿಗೆ ವಿಸ್ತರಿಸಿರುವುದು ಬಿಜೆಪಿ ಸಾಧನೆಯಾಗಿದೆ ಎಂದರು.
ಚುನಾವಣೆ ಪೂರ್ವದಲ್ಲಿಯೇ ಕಾಂಗ್ರೆಸ್ ನಾಯಕರು ರಾಜ್ಯ ನಾಯಕತ್ವದಲ್ಲಿ ದ್ವಂದ್ವ ನಿಲುವು ತಳೆದಿದ್ದು, ಅಧಿಕಾರಕ್ಕೆ ಬರುವ ಮುನ್ನವೇ ನಾಯಕರಲ್ಲಿ ಕಚ್ಚಾಟ ಆರಂಭವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ ಹಾಗೂ ಸಿದ್ದರಾಮಯ್ಯ, ಇನ್ನಿತರ ಮುಖಂಡರು ತಮ್ಮ ಭಾಷಣದಲ್ಲೆಲ್ಲಾ ನಾನೆ ಮುಖ್ಯಮಂತ್ರಿಗಳೆಂದು ಘೋಷಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆ ಪಕ್ಷಕ್ಕೆ ಚುನಾವಣೆಯಲ್ಲಿ ಭವಿಷ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement