ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿಗೆ ಸ್ಪಷ್ಟ ಬಹುಮತ: ಜೋಶಿ ವಿಶ್ವಾಸ

Lingaraj Badiger
Updated On : 22 Apr 2013, 12:24 pm

ಲಕ್ಷ್ಮೇಶ್ವರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಿದೆ. ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.
ಭಾನುವಾರ ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ದೇಶ ರಕ್ಷಣೆ ಮಾಡುವುದಾಗಿ ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಆದರೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿಕೊಂಡು ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶದ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಶಾಸಕ ರಾಮಣ್ಣ ಲಮಾಣಿ, ವಿನಯ ಪಾಟೀಲ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡರ, ಗದಗ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಶಿರಹಟ್ಟಿ ತಾಲೂಕು ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ವಿ.ಎಲ್. ಪೂಜಾರ. ಬಸಣ್ಣ ಹತ್ತಿಕಾಳ, ಕಮಲಮ್ಮ ಸಜ್ಜನರ, ಸೋಮಣ್ಣ ಮುಳಗುಂದ, ಮಂಜುನಾಥ ಮಾಗಡಿ, ನೀಲಪ್ಪ ಹತ್ತಿ, ನಾಗರಾಜ ಚಿಂಚಲಿ, ವಿಜಯ ಹಳ್ಳಿ, ನಾಗರಾಜ ಕುಲಕರ್ಣಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement