ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿಗೆ ತಕ್ಕಪಾಠ ಕಲಿಸಿ

Rashmi Kasaragodu
Updated On : 24 Apr 2013, 11:04 am

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಏ. 23
ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತರ ಮೇಲೆಯೇ ಗೋಲಿಬಾರ್ ನಡೆಸಿದ ಮತ್ತು ರಾಜ್ಯ ಕಂಡ ಅತೀ ಭ್ರಷ್ಟ ಸರ್ಕಾರಕ್ಕೆ ಜನತೆ ಈ ಬಾರಿ ತಕ್ಕಪಾಠ ಕಲಿಸಬೇಕು ಎಂದು ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಸೋಮವಾರ ತಾಲೂಕಿನ ಸುಗ್ನಳ್ಳಿ ಗ್ರಾಮದಲ್ಲಿ ಮನೆ-ಮನೆಗೆ ಮತಯಾಚಿಸಿ ಮಾತನಾಡಿದರು. ಬಿಜೆಪಿಯ ಜನ ವಿರೋಧಿ ಧೋರಣೆಯಿಂದ ಜನರು ರೋಸಿ ಹೋಗಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಮಾತನಾಡಿ, ರಾಜ್ಯದ ಇತಿಹಾಸದಲ್ಲಿಯೇ ರಾಜ್ಯದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ, ಸಚಿವರು, ಶಾಸಕರು ಜೈಲು ಪಾಲಾಗಿರುವ ಘಟನೆ ರಾಜ್ಯಕ್ಕೆ ಕಪ್ಪು ಚುಕ್ಕೆ. ಹಾಗೂ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದ ಜನಪ್ರತಿನಿಧಿಗಳಿಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದರು.
 ಜಿಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ, ಮಂಜುನಾಥ ಘಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಷ್ಮೀಗೌಡ ಪಾಟೀಲ, ವಿರೂಪಾಕ್ಷಪ್ಪ ರಾಹುತ್, ದಾನಪ್ಪ ರಾಹುತ್, ನಾಗಪ್ಪ ವಾಲಿಕಾರ, ರಾಮಣ್ಣ ವಡವಿ, ದೇವಪ್ಪ ಲಮಾಣಿ, ದೇವಪ್ಪ ಸಂಗಟಿ, ನಿಂಗಪ್ಪ ಬಳ್ಳಾರಿ, ದೇವಪ್ಪ ಜಕಲಿ, ಮಾಹದೇವಗೌಡ ಪಾಟೀಲ, ಮಂಜಪ್ಪ ಆಡಿನ, ಶರಣಪ್ಪ ಕುಬಸದ, ಚನ್ನಬಸಯ್ಯ ಮಾಗಳಮಠ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement