ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗದಗನಲ್ಲಿ ಕಾಂಗ್ರೆಸ್ ಪರ ಒಲವು: ಪಾಸ್ಟರ್

Rashmi Kasaragodu
Updated On : 25 Apr 2013, 11:47 am

ಕನ್ನಡಪ್ರಭ ವಾರ್ತೆ, ಗದಗ, ಏ. 24
ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಒಲವು ಕಂಡು ಬರುತ್ತಿದೆ ಎಂದು ಕ್ರಿಶ್ಚಿಯನ್ ಸಮುದಾಯದ ಮುಖಂಡ ಫ್ರಾನ್ಸಿಸ್ ಪಾಸ್ಟರ್ ಹೇಳಿದರು.
ಮಂಗಳವಾರ ಬೆಟಗೇರಿಯ ಗೋಮಸ್ ಹಾಲ್ ವಕೀಲ ಚಾಳದಲ್ಲಿ ಗದಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲರ ಚುನಾವಣಾ ಪ್ರಚಾರ ನಿಮಿತ್ತ ಸೇರಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗದಗ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರಲಿ. ಕ್ರಿಶ್ಚಿಯನ್ ಸಮುದಾಯದ ಮೇಲಿನ ದೌರ್ಜನ್ಯ, ಚರ್ಚ್ ಮೇಲಿನ ದಾಳಿ ನಿಲ್ಲಲಿ ಎಂದು ಆಶಿಸಿದರು.
ಐದು ವರ್ಷಗಳಲ್ಲಿ ಕ್ಷೇತ್ರ ಅಭಿವೃದ್ಧಿಯಾಗದೆ ಹಿನ್ನಡೆಯಲ್ಲಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲರನ್ನು ಆಯ್ಕೆ ಮಾಡುವಂತೆ ದೇವರಲ್ಲಿ ಪ್ರಾರ್ಥಿಸೋಣ ಎಂದರು.
ಅಭ್ಯರ್ಥಿ ಎಚ್.ಕೆ. ಪಾಟೀಲ ಮಾತನಾಡಿ, ಮತ ನೀಡುವಂತೆ ವಿನಂತಿಸಿದರು. ಫ್ರಾಂಕ್ಲಿನ್ ದಲಭಂಜನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ನಗರಸಭೆಯ ಸದಸ್ಯ ಶ್ರೀನಿವಾಸ ಹುಯಿಲಗೋಳ, ಕ್ರಿಶ್ಚಿಯನ್ ಸಮುದಾಯದ ಅನೇಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement