ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ದಕ್ಷ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ

Vishwanath S
Updated On : 1 May 2013, 11:19 am

ಕನ್ನಡಪ್ರಭ ವಾರ್ತೆ, ಗದಗ, ಏ. 30
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಹಲವಾರು ಹಗರಣಗಳನ್ನು ಮಾಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡಿದೆ. ಈ ಬಾರಿ ರಾಜ್ಯದಲ್ಲಿ ದಕ್ಷ ಆಡಳಿತ, ಸಮರ್ಥ ನಾಯಕತ್ವಕ್ಕಾಗಿ ಕಾಂಗ್ರೆಸ್ ಬೆಂಬಲಿಸಬೇಕೆಂದು ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ ಹೇಳಿದರು.
ಅವರು ಮಂಗಳವಾರ ಹರ್ಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಮಾಜದಲ್ಲಿರುವ ದೀನಸ, ದಲಿತ, ರೈತರ, ಬಡವರ ಹಾಗೂ ಕಾರ್ಮಿಕರ ಸಲುವಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿರುವ ಹಲವು ಸಚಿವರು ಹಾಗೂ ಮುಖ್ಯಮಂತ್ರಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. ದೇಶದಲ್ಲಿ ಇಂದು ಕರ್ನಾಟಕದವರು ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದರು.
ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ ಎನ್ನುವ ಬಿಜೆಪಿಗರು ತಮ್ಮ ಸ್ವಾರ್ಥ ಸಾಧನೆಗಾಗಿ ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಬಾರಿ ರೋಣ ಮತಕ್ಷೇತ್ರದ ಜನತೆ ಕಾಂಗ್ರೆಸ್ ಬೆಂಬಲಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಾಸಣ್ಣ ಕುರುಡಗಿ ಮಾತನಾಡಿ, ಜಿ.ಎಸ್. ಪಾಟೀಲರು ಎರಡು ಅವಧಿಯ ಶಾಸಕತ್ವ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅಧಿಕಾರ ಇಲ್ಲದಿದ್ದಾಗಲೂ ಸಮಾಜ ಸೇವೆ ಮಾಡಿದ್ದಾರೆ. ರೋಣ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ದೀನ-ದಲಿತರ, ಹಿಂದುಳಿದವರ ಅಭಿವೃದ್ಧಿಗಾಗಿ ಪಾಟೀಲರನ್ನು ಬೆಂಬಲಿಸಬೇಕು ಎಂದರು.
ಬಳಿಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ರವಿ ದಂಡಿನ, ಹಾಲಪ್ಪ ಹರ್ತಿ, ವಸಂತಗೌಡ ಪಾಟೀಲ, ಹನುಮವ್ವ ಚಟ್ರಿ, ನಿಂಗರಡ್ಡಿ ಕೊಣ್ಣೂರ, ಪರಮೇಶ್ವರಪ್ಪ ಗಂಗಾವತಿ, ಅರುಣ ಅಗಸನಕೊಪ್ಪ, ನಾರಾಯಣರಾವ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement