ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿ ಕಿತ್ತುಹಾಕಿ: ರಿಜ್ವಾನ ಅರ್ಷದ್

Vishwanath S
Updated On : 1 May 2013, 11:17 am

ರೋಣ: ರಾಜ್ಯದಲ್ಲಿ ಬಿಜೆಪಿ ಕೇವಲ 5 ವರ್ಷದ ಅವಧಿಯಲ್ಲಿ ರು. 3 ಲಕ್ಷ ಕೋಟಿಗಳ ಭ್ರಷ್ಟಾಚಾರ ಮಾಡಿದೆ. ಅಭಿವೃದ್ಧಿ ಮುಖವಾಡ ಧರಿಸಿ ಜನತೆಯನ್ನು ವಂಚಿಸಿ ರಾಜ್ಯವನ್ನು ಲೂಟಿ ಮಾಡಿದ ಬಿಜೆಪಿಯನ್ನು ಬೇರು ಸಹಿತ ಕಿತ್ತು ಹಾಕಿರಿ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ ಅರ್ಷದ್ ಮತದಾರರಲ್ಲಿ ಮನವಿ ಮಾಡಿದರು.
ಅವರು ಸೋಮವಾರ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಅಲ್ಪಸಂಖ್ಯಾತರ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡವರನ್ನು ಬರಮಾಡಿಕೊಂಡು ಮಾತನಾಡಿದರು.  ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ, ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಲವಾರು ಶಾಸಕರು, ಸಚಿವರು ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿದರು. ಕಾಂಗ್ರೆಸ್ನಲ್ಲಿ ಎಲ್ಲಾ ಸಮುದಾಯದ ಜನರಿದ್ದಾರೆ. ಇಲ್ಲಿ ಎಲ್ಲರಿಗೂ ಅವಕಾಶವಿದೆ. ಅಧಿಕಾರವಿರಲಿ ಬಿಡಲಿ ಸದಾ ಜನತೆಯ ಸಮಸ್ಯೆಗೆ, ಅಭಿವೃದ್ಧಿ ಪರ ಚಿಂತನೆಯು ಕಾಂಗ್ರೆಸ್ ಧ್ಯೇಯವಾಗಿದೆ. ರೋಣ ಮತ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ರೈತರ, ಬಡವರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿರುವ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ವಿನಂತಿಸಿದರು.   ಹಾವೇರಿ ಲೋಕಸಭೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜಿ.ಎಸ್. ಪಾಟೀಲ, ಬಿಎಸ್ಆರ್ ತೊರೆದು ಕಾಂಗ್ರೆಸ್ ಸೇರಿದ ಸುಭಾಸ ದಾನರಡ್ಡಿ ಮಾತನಾಡಿದರು. ವೈ.ಎನ್. ರುದ್ರಗೌಡ, ವಿ.ಆರ್. ಗುಡಿಸಾಗರ, ರಾಜೇಂದ್ರ ಪಾಟೀಲ, ವಿಶ್ವನಾಥ ಜಿಡ್ಡಿಬಾಗೀಲ, ಎ.ಬಿ. ಬೇಟಗೇರಿ, ಕೆ.ಬಿ. ಹರ್ಲಾಪೂರ, ಎಂ.ಎಫ್. ಕೊಪ್ಪಳ, ಅಮೃತಗೌಡ ಗೌಡರ, ಸಂಗು ನವಲಗುಂದ, ಪರಶುರಾಮ ಅಳಗವಾಡಿ, ಅಶೋಕ ದೇಶಣ್ಣವರ, ಭವಾಣಿ ಬೇಟಗೇರಿ ಇದ್ದರು. ಅಜೀಜ ಯಲಿಗಾರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement