ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕ್ಷೀರಭಾಗ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ

Lingaraj Badiger
Updated On : 2 Aug 2013, 10:49 am

ಮುಂಡರಗಿ: ಸರ್ಕಾರ ಜಾರಿಗೆ ತಂದಿರುವ ಕ್ಷೀರಭಾಗ್ಯ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ. ಮೋಹನ್ ಹೇಳಿದರು.
ಅವರು ಗುರುವಾರ ಪಟ್ಟಣದ ಎಂಸಿಎಸ್ ಶಾಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಸಿಡಿಪಿಓ ಎಸ್.ಎಸ್. ವಾರದ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಸಂಪೂರ್ಣ ನಿವಾರಿಸುವ ನಿಟ್ಟಿನಲ್ಲಿ ಗಮನಹರಿಸಿದ್ದು, ಇದು ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿ ಇಂದು ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ ಎಂದರು. ಅಧ್ಯಕ್ಷತೆವಹಿಸಿದ್ದ  ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶರಣಯ್ಯ ಅಳವಂಡಿಮಠ, ಎಚ್.ಎನ್. ಹಿರೇಮಠ, ಎಸ್.ಸಿ. ಯಂಡಿಗೇರಿ, ಎಸ್.ಎಸ್. ದಾನರಡ್ಡಿ ಹಾಗೂ ಶಿಕ್ಷಕ, ಶಿಕ್ಷಕಿಯರು ಪಾಲ್ಗೊಂಡಿದ್ದರು. ಎಚ್.ಎನ್. ಹಿರೇಮಠ ಸ್ವಾಗತಿಸಿದರು. ಅವಿನಾಶ ಗೋಡಖಿಂಡಿ ನಿರೂಪಿಸಿದರು. ಆರ್.ಬಿ.ಪೂಜಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement