ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಡಂಬಳ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಲು ಚಿಂತನೆ

Mainashree
Updated On : 4 Aug 2013, 1:17 am

ಕನ್ನಡಪ್ರಭ ವಾರ್ತೆ, ಗದಗ, ಆ. 3
ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿರುವ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಕೆ.ಎಸ್.ಆರ್ ಚರಣರಡ್ಡಿ ಹೇಳಿದರು.
ಅವರು ಶನಿವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜನಸಂಖ್ಯೆ ಹಾಗೂ ಅಪರಾಧ ಸಂಖ್ಯೆಯ ಆಧಾರದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ರೋಣ, ನರಗುಂದ, ಮುಂಡರಗಿ ತಾಲೂಕುಗಳನ್ನೊಳಗೊಂಡಂತೆ ಒಂದು ಉಪವಿಭಾಗ ಠಾಣೆಯನ್ನು ತೆರೆಯುವ ಕುರಿತ ಪ್ರಸ್ತಾವನೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದ್ದು, ಇದರಿಂದ ಜಿಲ್ಲೆಯ ಜನತೆಯ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಸಹಕಾರಿಯಾಗಲಿದೆ. ಗದಗ ಜಿಲ್ಲೆಯಲ್ಲಿ ಇಲಾಖೆಯ ಸಿಬ್ಬಂದಿಗಳಿಗಾಗಿ 206 ವಸತಿ ಗೃಹಗಳು ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಟೆಂಡರ್ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು. ರಂಜಾನ್ ಹಾಗೂ ಗಣೇಶ ಚತುರ್ಥಿಯನ್ನು ಅರ್ಥಪೂರ್ಣವಾಗಿ ಯಾವುದೇ ಅಹಿತಕರ ಘಟನೆ ಜರುಗದಂತೆ ಆಚರಿಸುವ ಉದ್ದೇಶದಿಂದ ಹೆಚ್ಚಿನ ಭದ್ರತೆಗಾಗಿ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥಿತವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯವೈಖರಿ ಮೆಚ್ಚುವಂತಹದ್ದು, ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರದ ಕುರಿತಾಗಿ ಇನ್ನು ಹೆಚ್ಚಿನ ಕಾಳಿಜಿಯನ್ನು ವಹಿಸಬೇಕು ಎಂದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement