ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಾಳೆ ಕಲ್ಯಾಣ ಬಸವೇಶ್ವರ ದೇವಸ್ಥಾನ ಉದ್ಘಾಟನೆ

Vishwanath S
Updated On : 11 Aug 2013, 11:51 am

ಗದಗ:  ನಗರದ ಡಿ.ಸಿ.ಮಿಲ್ ರಸ್ತೆಯಲ್ಲಿರುವ ಪುರಾತನವಾದ ಕಲ್ಯಾಣ ಬಸವೇಶ್ವರ ದೇವಸ್ಥಾನದ ಮರು ನಿರ್ಮಾಣಗೊಂಡ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಮುದಾಯ ಭವನದ ಉದ್ಘಾಟನೆ ಸಮಾರಂಭ ಆಗಸ್ಟ್ 12ರಂದು ಬೆಳಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ದಲಿಂಗ ಶ್ರೀಗಳು ವಹಿಸುವರು. ಅಧ್ಯಕ್ಷತೆಯನ್ನು ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಗಂಗಾಧರಪ್ಪ ಕೋಟಿ ವಹಿಸುವರು. ಉದ್ಘಾಟನೆಯನ್ನು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ನೆರವೇರಿಸುವರು.  ಗದಗ ಬೆಟಗೇರಿ ನಗರಸಭೆ ಸದಸ್ಯ ಸದಾನಂದ ಪಿಳ್ಳೆ, ಕೃಷ್ಣಾ ಪರಾಪುರ ಪಾಲ್ಗೊಳ್ಳುವರು. ಆ. 11ರ ಬೆಳಗ್ಗೆ ನೂತನ ಬಸವೇಶ್ವರ ಮೂರ್ತಿಯ ಮೆರವಣಿಗೆ ಹಾಗೂ ಆ. 12ರಂದು ಬೆಳಗ್ಗೆ 6 ಗಂಟೆಗೆ ಅಡ್ನೂರಿನ ಪಂಚಾಕ್ಷರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ಕಲ್ಯಾಣಬಸವೇಶ್ವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ ಎಂದು ದೇವಸ್ಥಾನ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಪಾಲಾಕ್ಷಪ್ಪ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement