ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಸ್ವಾತಂತ್ರ್ಯ ದಿನಾಚರಣೆ

Vishwanath S
Updated On : 15 Aug 2013, 11:22 am

ಗದಗ: ಜಿಲ್ಲಾ ಆಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ. 15ರಂದು ಬೆಳಗ್ಗೆ 9ಕ್ಕೆ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರಿಂದ ಧ್ವಜಾರೋಹಣ ಜರುಗಲಿದೆ. ಅಂದು ಸಂಜೆ 5.30ಕ್ಕೆ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿ: ಜಿಲ್ಲಾ ಕಾಂಗ್ರೆಸ್ ಕಮಿಟಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ. 15ರ ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಧ್ವಜಾರೋಹಣ ನೆರವೇರಿಸುವರು ಎಂದು ಜಿ.ವಿ. ಬಳಗಾನೂರ, ಪರಪ್ಪ ಬಂದಕ್ಕನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಪೂ ಕಾಲೇಜು: ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಪಪೂ ಕಾಲೇಜಿನಲ್ಲಿ ಆ. 15ರಂದು ಬೆಳಗ್ಗೆ 7.15ಕ್ಕೆ ಸ್ವಾತಂತ್ರ್ಯ ದಿನ ಆಚರಿಸಲಾಗುವುದು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಧ್ವಜಾರೋಹಣ ನೆರವೇರಿಸುವರು. ಸಗರಸಭೆಯ ಮಾಜಿ ಸದಸ್ಯ ಮೋಹಬೂಬ ಮಿಸ್ಕಿನ ಅಧ್ಯಕ್ಷತೆ ವಹಿಸುವರು ಎಂದು ಪ್ರಾ. ವೈ.ಆರ್. ಹಿರೇಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಕನ ಬಳಗ: ಗದುಗಿನ ಅಕ್ಕನ ಬಳಗದಲ್ಲಿ ಆ.15ರ ಬೆಳಗ್ಗೆ 8.30ಕ್ಕೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಕ್ಕನ ಬಳಗದ ಆವರಣದಲ್ಲಿ ನಡೆಯಲಿದೆಂದು ಅಕ್ಕನ ಬಳಗದ ಕಾರ್ಯದರ್ಶಿ ಮೀನಾಕ್ಷಿ ಸಜ್ಜನರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement