ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗ್ರಾಪಂ ಮಟ್ಟಕ್ಕೆ ಅಧಿಕಾರಕೊಟ್ಟಿದ್ದು ಕಾಂಗ್ರೆಸ್: ಲಾಡ್

Vishwanath S
Updated On : 15 Aug 2013, 11:22 am

ಕನ್ನಡಪ್ರಭ ವಾರ್ತೆ, ಮಂಡರಗಿ, ಆ. 14
ಗ್ರಾಪಂ ಮಟ್ಟಕ್ಕೆ ಅಧಿಕಾರಕೊಟ್ಟಿದ್ದು ಕಾಂಗ್ರೆಸ್ ಪಕ್ಷವಾಗಿದೆ. ಇಂಥ ಸರ್ಕಾರದ ಕೈಯನ್ನು ಮತ್ತಷ್ಟು ಬಲಪಡಿಸಲು ವಿಧಾನ ಪರಿಷತ್‌ನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಗರಾಜ ಛಬ್ಬಿಗೆ ಮತ ನೀಡಿ ಆಯ್ಕೆ ಮಾಡಬೇಕೆಂದು ವಾರ್ತಾ ಇಲಾಖೆಯ ಸಚಿವ ಸಂತೋಷ ಲಾಡ್ ಮನವಿ ಮಾಡಿದರು.
ಅವರು ಮಂಗಳವಾರ ಮುಂಡರಗಿಯ ನಾಡಗೌಡ್ರ ವಾಡೆಯಲ್ಲಿ ವಿ.ಪ. ಅಭ್ಯರ್ಥಿ ನಾಗರಾಜ ಛಬ್ಬಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತಯಾಚಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲ ಭರವಸೆ ಈಡೇರಿಸುತ್ತಿದೆ ಎಂದರು. ಆ. 22ರಂದು ನಡೆಯುವ ವಿಪ ಚುನಾವಣೆಯಲ್ಲಿ ನಾಗರಾಜ ಛಬ್ಬಿ ಅವರಿಗೆ ಪ್ರಥಮ ಆದ್ಯತೆಯ ಮತ ಹಾಕಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು. ಕಾಂಗ್ರೆಸ್ ಧುರೀಣ ಐ.ಜಿ. ಸನದಿ, ಕಾಂಗ್ರೆಸ್ ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಟಿ. ಈಶ್ವರ, ಶಾಸಕ ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಕೆಪಿಸಿಸಿ ಸದಸ್ಯ ವಾಸಣ್ಣ ಕುರಡಗಿ, ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಬ್ಲಾಟ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ವಿ.ಎಲ್. ನಾಡಗೌಡ್ರ ನಾಗರಾಜ ಛಬ್ಬಿ ಪರ ಮತಯಾಚಿಸಿದರು. ಅಭ್ಯರ್ಥಿ ನಾಗರಾಜ ಛಬ್ಬಿ ಮಾತನಾಡಿ, ಮತ ನೀಡಿ ಆಯ್ಕೆ ಮಾಡಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಕೋರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಚಂದ್ರಹಾಸ ಉಳ್ಳಾಗಡ್ಡಿ, ಹುಬ್ಬಳ್ಳಿ-ಧಾರವಾಡ ಮೇಯರ್ ಅನಿಲಕುಮಾರ, ಗಂಗಣ್ಣ ಸೊರಟೂರ, ಭೀಮಸಿಂಗ್ ರಾಠೋಡ, ರಾಮಣ್ಣ ಬಳ್ಳಾರಿ, ಎಸ್.ಡಿ. ಮಕಾಂದಾರ, ಲಿಂಗರಾಜಗೌಡ ಪಾಟೀಲ, ಬಸವರಾಜ ರಾಮೇನಹಳ್ಳಿ, ಬಸವರಾಜ ಬಿಸನಳ್ಳಿ ಇದ್ದರು. ರಾಮು ಕಲಾಲ ಸ್ವಾಗತಿಸಿದರು. ಶೇಖರ ಜುಟ್ಲಣ್ಣವರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement