ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಉದ್ಯೋಗ ಖಾತ್ರಿ ಲೆಕ್ಕಕೊಡಿ ಶೆಟ್ರೆ: ಎಚ್ಕೆ

Rashmi Kasaragodu
Updated On : 17 Aug 2013, 1:31 am

ಕ.ಪ್ರ.ವಾರ್ತೆ   ಗದಗ   ಆ. 16
ಬಿಜೆಪಿ ಸರ್ಕಾರದ ಕೊನೆ ಅವಧಿಯಲ್ಲಿ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ 3.50 ಲಕ್ಷ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಕೇಂದ್ರ ಸರ್ಕಾರಕ್ಕೆ ಅಂಕಿ ಅಂಶ ನೀಡಿದ್ದೀರಿ, ಮೊದಲು ಅದರ ಬಗ್ಗೆ ಲೆಕ್ಕ ಕೊಡಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಆಗ್ರಹಿಸಿದ್ದಾರೆ.
ಅವರು ಶುಕ್ರವಾರ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಪ್ರಚಾರ ನಡೆಸಿ, ಬಿಜೆಪಿ ಸರ್ಕಾರದ ಕೊನೆಯಲ್ಲಿ ಖಾತ್ರಿ ಯೋಜನೆಯಲ್ಲಿ 600 ಕೋಟಿ ಖರ್ಚು ಹಾಕಿದ್ದೀರಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದೀರಿ. ನಾನು ಅಧಿಕಾರ ವಹಿಸಿಕೊಂಡ ತಕ್ಷಣವೇ ಈ ಸಂಖ್ಯೆಯನ್ನು ನೋಡಿ ನಿಜವಾಗಿಯೂ ಗಾಬರಿಯಾದೆ, ಅದಕ್ಕಾಗಿ ಮೊದಲು ನನ್ನ ಜಿಲ್ಲೆಯಲ್ಲಿ ಆಗಿರುವ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಇಲಾಖೆಯ ನಿರ್ದೇಶಕರ ಮೂಲಕ ತನಿಖೆ ಮಾಡಿಸಿದ ವೇಳೆಯಲ್ಲಿ ಆಶ್ಚರ್ಯ ಕಾದಿತ್ತು ಎಂದರು.
ನೀವೆಲ್ಲಾ ಅಕ್ರಮ ನಡೆಸಿದ್ದೀರಿ: ಗದಗ ಜಿಲ್ಲೆಯಲ್ಲಿ 9525 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದೀರಿ. ಆದರೆ, ವಾಸ್ತವದಲ್ಲಿ 3 ಕಾಮಗಾರಿ ಪ್ರಗತಿಯಲ್ಲಿರುವುದು ತನಿಖೆ ವೇಳೆಯಲ್ಲಿ ಪತ್ತೆಯಾಗಿದೆ. ಇಂಥ ಹಲವಾರು ಅಕ್ರಮಗಳನ್ನು ನಡೆಸಿ, ಗ್ರಾಮಸಭೆಗಳನ್ನು ನಡೆಸದೇ ಗ್ರಾಪಂ ಸದಸ್ಯರು ಭ್ರಷ್ಟಾಚಾರಕ್ಕೆ ಇಳಿದಿದ್ದಾರೆ. ಪ್ರವಾಸಿ ಮಂದಿರಗಳಲ್ಲಿ ಗ್ರಾಮ ಸಭೆಗಳನ್ನು ನಡೆಸಿ, ಅಕ್ರಮ ನಡೆಸಲಾಗಿದೆ. ಇಂಥ ಅಕ್ರಮ ನಡೆಸಿರುವ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಅದನ್ನು ಬಿಟ್ಟು ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಕಾಂಗ್ರೆಸ್ ಕಿತ್ತುಕೊಳ್ಳುತ್ತಿದೆ ಎನ್ನುವ ಹಸಿ ಹಸಿ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಬೇಡಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement