ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಾಂಗ್ರೆಸ್ ಗೆಲವು ಖಚಿತ: ದೊಡ್ಡಮನಿ

Lingaraj Badiger
Updated On : 23 Aug 2013, 12:32 pm

ಕನ್ನಡಪ್ರಭ ವಾರ್ತೆ, ಮುಂಡರಗಿ, ಆ. 22
ವಿಪ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಗೆಲುವು ಖಚಿತ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಗುರುವಾರ ಮುಂಡರಗಿ ತಾಪಂನ ಸಮರ್ಥಸೌಧದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿಯೇ ಅನ್ನಭಾಗ್ಯ, ಕ್ಷೀರಭಾಗ್ಯ, ರು. 2 ಲಕ್ಷದವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳೆಲ್ಲವೂ ಯಶಸ್ವಿಯಾಗಿ ಜಾರಿಯಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸಿದಂತೆ ಸ್ಥಳೀಯ ಸಂಸ್ಥೆಯ ಉಪಚುನಾವಣೆಯಲ್ಲಿಯೂ ಜನಪ್ರತಿನಿಧಿಗಳು ಕಾಂಗ್ರೆಸ್‌ನ ನಾಗರಾಜ ಛಬ್ಬಿಯವರಿಗೆ ಮತ ನೀಡಲಿದ್ದಾರೆ.
ಪ್ರತಿ ತಾಲೂಕಿಗೆ 70 ಕೆರೆಗಳನ್ನು ನಿರ್ಮಾಣ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದ್ದು, ದುಡಿಯುವ ಕೈಗಳಿಗೆ ಶಕ್ತಿ ನೀಡುವಂತೆ ಅನೇಕ ಯೋಜನೆಗಳನ್ನು ಸರ್ಕಾರ ಹಾಕಿಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ತಾಲೂಕು ಬ್ಲಾಕ್ ಕಾಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ಅಬ್ದುಲ್ ಹಣಗಿ, ರಾಮು ಕಲಾಲ, ಎಸ್.ಡಿ. ಮಕಾಂದಾರ, ರಾಮಣ್ಣ ಬಳ್ಳಾರಿ, ಆನಂದಗೌಡ ಪಾಟೀಲ, ಧ್ರವಕುಮಾರ ಹೊಸಮನಿ, ಶೇಖರ ಜುಟ್ಲನ್ನವರ, ಯಲ್ಲಪ್ಪ ಗಣಾಚಾರಿ, ಸುರೇಶ ಮಾಗಡಿ, ಸೇಖರಾಜ ಹೊಸಮನಿ ಹಾಗೂ ಪುರಸಭೆ ಕಾಂಗ್ರೆಸ್ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
--
ಗದಗ: ಶೇ. 99.66ರಷ್ಟು ಮತದಾನ
ಗದಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಉಪ ಚುನಾವಣೆಗೆ ಗುರುವಾರ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು 99.66ರಷ್ಟು ಮತದಾನವಾಗಿದೆ. 1908 ಜನರು ಮತದಾನದ ಹಕ್ಕನ್ನು ಹೊಂದಿದ್ದು, ಅವರಲ್ಲಿ 1901 ಮತದಾರರು ಮತ ಚಲಾಯಿಸಿದ್ದು, ಗದಗ ತಾಲೂಕಿನಲ್ಲಿ 4 ಜನರು, ರೋಣ, ನರಗುಂದ, ಶಿರಹಟ್ಟಿಯಲ್ಲಿ ತಲಾ ಒಬ್ಬರು ಸೇರಿದಂತೆ ಒಟ್ಟು 7 ಜನರು ಮತ ಚಲಾವಣೆ ಮಾಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಗದಗನಲ್ಲಿ, ಜಿ.ಎಸ್. ಪಾಟೀಲ ರೋಣದಲ್ಲಿ, ರಾಮಕೃಷ್ಣ ದೊಡ್ಡಮನಿ ಮುಂಡರಗಿಯಲ್ಲಿ ಮತದಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement