ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

30ರಂದು ಸಮ್ಮೋಹನ ಕಾರ್ಯಾಗಾರ

Mainashree
Updated On : 28 Aug 2013, 11:40 am

ನರೇಗಲ್ಲ:  ಇತ್ತೀಚಿನ ದಿನಗಳಲ್ಲಿ ಸಮ್ಮೋಹನ ಕುರಿತು ಮಾಧ್ಯಮಗಳ ಮೂಲಕ ಜನರನ್ನು ತಪ್ಪು ಹಾದಿಗೆಳೆಯುತ್ತಿರುವ ಸ್ವಯಂ ಘೋಷಿತ ಗುರೂಜಿ ಹಾಗೂ ಮರಿ ಗುರೂಜಿಗಳ ವಿರುದ್ಧ ಜನರನ್ನು ಜಾಗೃತಿಗೊಳಿಸಲು ಆ. 30ರಂದು ಸ್ಥಳೀಯ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಂಸ್ಥೆಯು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಪ್ರಾಯೋಜಕತ್ವದಲ್ಲಿ ಸಮ್ಮೋಹನ ಮತ್ತು ಆತ್ಮ ಸಮ್ಮೋಹನ ವಿಷಯ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಸ್ಥಳೀಯ ಅನ್ನದಾನೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಡಾ. ಅರವಿಂದ ಸಜ್ಜನ ಹೇಳಿದರು. ಅವರು ಸೋಮವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆ. 30ರ ಬೆಳಗ್ಗೆ 10 ಗಂಟೆಗೆ ಜರುಗುವ ಕಾರ್ಯಾಗಾರದ ಉದ್ಘಾಟನೆಯನ್ನು ಹಾಲಕೇರಿಯ ಅನ್ನದಾನೇಶ್ವರ ಸಂಸ್ಥಾನಮಠದ ಅನ್ನದಾನ ಶ್ರೀಗಳು ನೆರವೇರಿಸುವರು. ಅತಿಥಿಗಳಾಗಿ ಹುಬ್ಬಳ್ಳಿಯ ಡಾ. ಮಹೇಶ ನಾಲವಾಡ ಭಾಗವಹಿಸುವರು. ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಬಿ. ಧನ್ನೂರ ವಹಿಸುವರು. ಸಮ್ಮೋಹನ ಕಾರ್ಯಾಗಾರವನ್ನು ಉದ್ದೇಶಿಸಿ ಪ್ರೊ. ರವೀಂದ್ರ ಕೊಪ್ಪರ, ಹುಬ್ಬಳ್ಳಿಯ ಸಮ್ಮೋಹನ ತರಬೇತುದಾರ ಪ್ರೊ. ಜಿ. ಸರಳಾಬಾಯಿ, ಯೋಗಾ ಕಾಲೇಜಿನ ಮುಖ್ಯ ವೈದ್ಯಾಧಿಕಾರಿ ಡಾ. ಸತೀಶ ಹೊಂಬಾಳಿ ಅವರು ಮಾಹಿತಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಅತಿಥಿಗಳಾಗಿ ಪತ್ರಕರ್ತ ಮಂಜುನಾಥ ಬೊಮ್ಮನಕಟ್ಟಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಸ್ಥಳೀಯ ಖ್ಯಾತ ವೈದ್ಯ ಡಾ. ಜಿ.ಕೆ. ಕಾಳೆ ವಹಿಸುವರು. ಶಿಬಿರಾರ್ಥಿಗಳಿಗೆ ಪ್ರಾಚಾರ್ಯ ಡಾ. ಅರವಿಂದ ಸಜ್ಜನ ತರಬೇತಿ ನೀಡುವರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement