ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ
ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗದಿಂದ 2013-14 ನೇ ಸಾಲಿಗೆ 6 ರಿಂದ 15 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 15 ವರ್ಷ ವಯಸ್ಸಿಗಿಂತ ಕಡಿಮೆ ವಯೋವುತಿ ಹೊಂದಿರಬೇಕು. ಅಸಾಧಾರಣ ಧೈರ್ಯ, ಶೌರ್ಯವನ್ನು ಸಾಧಿಸಿರಬೇಕು. ಈ ಸಾಧನೆಯು ಜಿಲ್ಲಾಮಟ್ಟದಲ್ಲಿ ಗುರುತಿಸಿರಬೇಕು. ಧೈರ್ಯ ಶೌರ್ಯಗಳನ್ನು ಪ್ರದರ್ಶಿಸಿದ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಪಂ, ತಾಪಂ ಶಾಲಾ ಶಿಕ್ಷಕರು ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು. ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-6 ಜಿಲ್ಲಾ ಆಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ಇವರಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಈ ಕಚೇರಿಯಲ್ಲಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸಲು ಸೆ. 10ರ ಸಂಜೆ 5.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.