ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸೆ. 5ರಂದು ಶಿಕ್ಷಕರ ದಿನ ಆಚರಣೆ

Mainashree
Updated On : 30 Aug 2013, 10:44 am

 ಕನ್ನಡಪ್ರಭ ವಾರ್ತೆ, ಮುಂಡರಗಿ, ಆ. 29
ಸೆ. 5ರಂದು ಶಿಕ್ಷಕರ ದಿನಾಚರಣೆಯನ್ನು ಮುಂಡರಗಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಬುಧವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸೆ. 5ರ ಬೆಳಗ್ಗೆ 11 ಗಂಟೆಗೆ ಕೆಇಬಿ ಹತ್ತಿರವಿರುವ ಗಣೇಶ ಗುಡಿಯಿಂದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ನಡೆಯುವುದು. ಮೆರವಣಿಗೆಯನ್ನು ಜ. ನಾಡೋಜ ಡಾ. ಅನ್ನದಾನೀಶ್ವರ ಶ್ರೀ ಉದ್ಘಾಟಿಸುವರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಇಲ್ಲಿಯ ತೊಂಟದಾರ್ಯ ಶಾಖಾಮಠದಲ್ಲಿ ಮುಕ್ತಾಯಗೊಂಡು ಅಲ್ಲಿಯೇ ಮಧ್ಯಾಹ್ನ 2.30 ಗಂಟೆಗೆ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ನಡೆಯುವುದು.
ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀ ವಹಿಸುವರು. ಶಾಸಕ ಜಿ.ಎಸ್. ಪಾಟೀಲ ಮತ್ತು ರಾಮಕೃಷ್ಣ ದೊಡ್ಡಮನಿ ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ತಾಲೂಕು ಉತ್ತಮ ಶಿಕ್ಷಕರಿಗೆ ಮತ್ತು ಈ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರಿಗೆ ಸನ್ಮಾನಿಸಲಾಗುವುದು ಎಂದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ತಾಪಂ ಸದಸ್ಯ ಪಿ.ಎಂ. ಪಾಟೀಲ, ಚಂದ್ರಹಾಸ ಉಳ್ಳಾಗಡ್ಡಿ, ಕೊಟ್ರೇಶ ಅಂಗಡಿ ಮುಂತಾದವರು ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ. ಮೋಹನ, ಹೇಮಂತಗೌಡ ಪಾಟೀಲ, ಧ್ರುವಕುಮಾರ ಹೊಸಮನಿ, ರಾಮಣ್ಣ ಬಳ್ಳಾರಿ, ಮಂಜುನಾಥ ಇಟಗಿ, ದೇವಪ್ಪ ರಾಮೇನಹಳ್ಳಿ, ದೇವಪ್ಪ ಕಂಬಳಿ, ಬಸವರಾಜ ರಾಮೇನಹಳ್ಳಿ, ಲಿಂಗರಾಜಗೌಡ ಪಾಟೀಲ, ಎ.ಪಿ. ದಂಡಿನ, ಬಸವರಾಜ ನವಲಗುಂದ ಮತ್ತು ಇಲಾಖಾ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement