ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮೌಲ್ಯಯುತ ಜೀವನಕ್ಕೆ ಕಾನೂನು ಅಗತ್ಯ: ಮಹಾವರಕರ

Mainashree
Updated On : 1 Sept 2013, 11:32 am

ರೋಣ: ಸಮಾಜದ ಸ್ವಾಸ್ಥ್ಯ ಹಾಗೂ ಮೌಲ್ಯಯುತ ಜೀವನಕ್ಕೆ ಕಾನೂನು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಕಾನೂನು ಜ್ಞಾನ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಡಿ. ಮಹಾವರಕರ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಶರಣ ಬಸವೇಶ್ವರ ಪಪೂ ಕಾಲೇಜ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಮತ್ತು ಶರಣ ಬಸವೇಶ್ವರ ಪಪೂ ಕಾಲೇಜ್ ಇವುಗಳ ಆಶ್ರಯದಲ್ಲಿ ಜರುಗಿದ ಕಾನೂನು ಸಾಕ್ಷರತಾ ಮತ್ತು ಜನತಾ ನ್ಯಾಯಾಲಯ ಕಾರ್ಯಕ್ರಮದಲ್ಲಿ ಮಾತನಾಡಿದರು.  
ಪ್ರತಿಯೊಬ್ಬರೂ ತಮ್ಮ ಮೂಲ ಹಕ್ಕು ಮತ್ತು ಕರ್ತವ್ಯಗಳ ಕುರಿತು ತಿಳಿಯಬೇಕು. ನಿತ್ಯ ಜೀವನದಲ್ಲಿ ಕಾನೂನು ಅನ್ವಯವಾಗುತ್ತದೆ. ಜನನದಿಂದ ಮರಣದವರೆಗೂ ಕಾನೂನು ಪಾಲನೆ ಅಗತ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕಾನೂನಿನ ಸಾಮಾನ್ಯ ಜ್ಞಾನ ಹೊಂದಿರಬೇಕು. ಶಾಸಕಾಂಗ ವ್ಯವಸ್ಥೆ ಮತ್ತು ಕಾರ್ಯವೈಖರಿ ಕುರಿತು ಶಾಲೆಗಳಲ್ಲಿ ಶಾಲಾ ಸಂಸತ್ ರಚಿಸಿ ತಿಳಿವಳಿಕೆ ನೀಡಲಾಗುತ್ತಿದೆ. ಕಾನೂನು ತಿಳಿವಳಿಕೆ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಬಾಲಾಪರಾಧಗಳು ಹೆಚ್ಚುತ್ತಿವೆ. ಆದ್ದರಿಂದ ಮಕ್ಕಳಿಗೆ ಕಾನೂನು ಜ್ಞಾನ ಅತ್ಯವಶ್ಯವಾಗಿದೆ ಎಂದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಐ.ಎಂ. ಪಾಟೀಲ ಮಾತನಾಡಿ, ವ್ಯಕ್ತಿ ಸಮಾಜ ಮತ್ತು ಸಂಘ ಜೀವಿಯಾಗಬೇಕಾದಲ್ಲಿ ಎಲ್ಲ ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ, ಧಾರ್ಮಿಕ ಕ್ಷೇತ್ರ ಸೇರಿದಂತೆ ಸಮಾಜದ ಎಲ್ಲ ಸ್ತರಗಳ ಜ್ಞಾನ ಮತ್ತು ಕಾನೂನು ತಿಳಿವಳಿಕೆ ಮುಖ್ಯವಾಗಿದೆ. ವಿದ್ಯಾರ್ಥಿ ಜೀವನ ಅಮೂಲ್ಯವಾದುದ್ದು, ಆದ್ದರಿಂದ ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗ ಪಡಿಸಿಕೊಂಡು ಭವಿಷ್ಯದ ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಬಿ.ಎಸ್. ಜೋಗಿನ ಮಾತನಾಡಿದರು. ಭಾರತದ ಸಂವಿಧಾನದಲ್ಲಿ ನಾಗರಿಕರ ಹಕ್ಕುಗಳು ಕುರಿತು ನ್ಯಾಯವಾದಿ ಎಲ್.ಎಂ. ಬಾಣದ ಉಪನ್ಯಾಸ ನೀಡಿದರು. ಸಹಾಯಕ ಸರ್ಕಾರಿ ಅಭಿಯೋಜಕ ನಾರಾಯಣ ಆರಿ,  ಜಿ.ಆರ್. ಯಳವತ್ತಿ ಸೇರಿದಂತೆ ಕಾಲೇಜ್ ಉಪನ್ಯಾಸಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿ.ಡಿ.ಪವಾಸ್ಕರ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement