ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸಿ: ಡಾ. ಎಂ.ಬಿ. ನಿಂಬಣ್ಣವರ

Vishwanath S
Updated On : 3 Dec 2013, 11:00 am

ರೋಣ: ಸದೃಢ ಸಮಾಜ ನಿರ್ಮಾಣವಾಗಲು ಸದೃಢ ವ್ಯಕ್ತಿಗಳು ದೇಶಕ್ಕೆ ಅಗತ್ಯವಿದ್ದು, ಆ ದಿಸೆಯಲ್ಲಿ ಬೆಳೆಯುವ ಮಕ್ಕಳಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸುವ ಅವಶ್ಯಕತೆ ಇದೆ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಎಂ.ಬಿ. ನಿಂಬಣ್ಣವರ ಹೇಳಿದರು.
ಅವರು ಭಾನುವಾರ ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಪರೀತ ಕಡಿಮೆ ತೂಕದ ಮಕ್ಕಳಿಗಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಸ್. ಮೋಕಾಶಿ ಮಾತನಾಡಿ, ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪತ್ತೆ ಮಾಡಿ, ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ನೀಡುವ ಮೂಲ ಉದ್ದೇಶ ಈ ಶಿಬಿರದ್ದಾಗಿದೆ. ತಾಲೂಕಿನಾದ್ಯಂತ ಇರುವ 284 ಅಪೌಷ್ಟಿಕತೆ ಇರುವ ಮಕ್ಕಳನ್ನು ಇಲ್ಲಿ ತಪಾಸಣೆ ನಡೆಸಿ, ಅವರಿಗೆ ಮುಂದಿನ ಚಿಕಿತ್ಸೆಯ ಬಗ್ಗೆ ಗಮನ ಹರಿಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವೈದ್ಯಾಧಿಕಾರಿ ಡಾ. ಡಿ.ಬಿ. ಚನ್ನಶೆಟ್ಟಿ ಮಾತನಾಡಿದರು. ಚಿಕ್ಕ ಮಕ್ಕಳ ತಜ್ಞ ಡಾ. ಎಸ್.ಐ. ಮಾನ್ವಿ, ಡಾ. ಎಸ್.ಎಫ್. ವರವಿ, ಡಾ. ಎಂ.ಜಿ. ದೇಸಾಯಿ, ಡಾ. ಪಿ.ಎಚ್. ಕಬಾಡಿ, ಜಿಲ್ಲಾ ಶಿಶು ಯೋಜನಾಧಿಕಾರಿ ಭಜಂತ್ರಿ, ಡಾ. ಮಧು ರಡ್ಡೇರ, ತಾಲೂಕು ವೈದ್ಯಾಧಿಕಾರಿ ಡಾ. ಎಂ.ಬಿ. ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement