ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿ

Vishwanath S
Updated On : 3 Dec 2013, 11:00 am

ನರಗುಂದ: ಇಂದಿನ ಆಧುನಿಕ ಯುಗದಲ್ಲಿ ಮಹಿಳೆ ಆರ್ಥಿಕವಾಗಿ ಬೆಳೆಯಬೇಕು. ಇದರಿಂದ ಅವರ ಕುಟುಂಬ ಉತ್ತಮವಾಗಿರಲು ಸಾಧ್ಯವಾಗುತ್ತದೆ. ಮಹಿಳೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸಮನ್ವಯಾಧಿಕಾರಿ ಹೇಮಾವತಿ ಜಗಡೆಯವರ ಹೇಳಿದರು.
ಈಚೆಗೆ ತಾಲೂಕಿನ ಶಿರೋಳದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ಶ್ರೀನಿಧಿ ಜ್ಞಾನ ವಿಕಾಸ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ದಿನಗಳಲ್ಲಿ ಮಹಿಳೆಗೆ ಹೆಚ್ಚು ಕೆಲಸ ಕಾರ್ಯಗಳಲ್ಲಿ ಪ್ರಾಶಸ್ತ್ಯ ನೀಡುತ್ತಿರಲಿಲ್ಲ ಎಂಬ ಆರೋಪಗಳಿದ್ದವು. ಆದರೆ,  ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಜಾರಿಗೆ ತರಲಾಗಿದ್ದು, ಹಾಗೂ ಮಹಿಳೆಯರಿಗೆ ಎಲ್ಲ ರಂಗದಲ್ಲಿಯೂ ಸ್ಥಾನಮಾನ ನೀಡಲಾಗುತ್ತಿದ್ದು, ಇದರಿಂದಾಗಿ ಮಹಿಳೆಯರೂ ಪುರುಷರಷ್ಟೇ ಸಮಾನ ಕೆಲಸ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ರಾಜ್ಯದಲ್ಲಿ ನೂರಾರು ಬಡ ಕುಟುಂಬಗಳಿಗೆ ನೆಮ್ಮದಿಯ ಬದುಕು ರೂಪಿಸಿಕೊಳ್ಳಲು ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಸಂಸ್ಥೆಯು ಸ್ವಾಲಂಬಿಗಳಾಗಿ ಬದುಕಲು ಸಹಕಾರಿಯಾಗಲು ಸಾಲಸೌಲಭ್ಯ ನೀಡುವ ಮೂಲಕ ಮಹಿಳೆಯು ಪುರುಷರಷ್ಟೇ ಸ್ವಾವಲಂಬಿಗಳಾಗಿ ಜೀವನ ನಡೆಸಲು ಶ್ರಮಿಸುತ್ತಿರುವುದು ಪ್ರಶಂಸನೀಯ ಎಂದರು.
ತಾಪಂ ಉಪಾಧ್ಯಕ್ಷೆ ಗುರುದೇವಿ ಶಾನವಾಡಮಠ ಕಾರ್ಯಕ್ರಮ ಉದ್ಘಾಟಿಸಿದರು. ಅನ್ನಪೂರ್ಣಾ ಹೊಸಮಠ, ಸುವರ್ಣಾ ಕೊಡಬಳ್ಳಿ, ಶಾರದಾ ಜವಳಿ, ಶಾಲೆಯ ಮುಖ್ಯೋಪಾಧ್ಯಾಯ ಎಸ್.ಸಿ.ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಶೈಲಾ ಹಾದಿಮನಿ ಸ್ವಾಗತಿಸಿದರು. ಮಂಜುನಾಥ ನಿರೂಪಿಸಿದರು. ನದಾಫ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement