ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಮರ್ಪಣಾ ಮನೋಭಾವ ಬೆಳೆಸಿಕೊಳ್ಳಿ

Vishwanath S
Updated On : 5 Dec 2013, 11:07 am

ಕನ್ನಡಪ್ರಭ ವಾರ್ತೆ, ಗದಗ, ಡಿ. 4
ಸೇವಾದಳ ಶಿಕ್ಷಕರು ಮಕ್ಕಳಲ್ಲಿ ಸಮರ್ಪಣಾ ಮನೋಭಾವದಂತಹ ಗುಣಗಳನ್ನು ಬಿತ್ತಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಹೇಳಿದರು.
ಇತ್ತೀಚಿಗೆ ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಜರುಗಿದ ಗದಗ ತಾಲೂಕು ಮಟ್ಟದ ಭಾರತ ಸೇವಾದಳ ಶಿಕ್ಷಕರ ಶಿಬಿರ ಉದ್ಘಾಟಿಸಿ ಮಾತನಾಡಿದರು. ಭಾರತ ಸೇವಾದಳ ಸ್ವಾತಂತ್ರ್ಯ ಸಂಗ್ರಾಮದ ನೆನಪಿನ ಕುರುಹು ಆಗಿದ್ದು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈ ಸಂಘಟನೆ ಉದ್ದೇಶಗಳು ಬಹಳ ಹಿರಿದಾಗಿದ್ದು, ಶಾಲಾ ಮಕ್ಕಳಲ್ಲಿ ದೇಶಾಭಿಮಾನ, ಸ್ವಾವಲಂಬನೆ, ಸೇವಾಮನೋಭಾವದಂತಹ ಉದಾತ್ತ ಗುಣಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದರು. ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎನ್. ಬಳ್ಳಾರಿ ಮಾತನಾಡಿ, ಭಯೋತ್ಪಾದನೆ, ನಕ್ಸಲೈಟ್‌ನಂತಹ ಸಾಮಾಜಿಕ ಪಿಡುಗುಗಳು ಕಂಠಕವಾಗುತ್ತಿರುವ ಈ ಸಂದರ್ಭದಲ್ಲಿ ಸೇವಾದಳ ಶಿಕ್ಷಣ ಅತ್ಯವಶ್ಯಕವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಬಸಣ್ಣ ಮಲ್ಲಾಡದ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ವಿ. ಕುಂದಗೋಳ, ಸೇವಾದಳದ ಜಿಲ್ಲಾ ಕಾರ್ಯದರ್ಶಿ ಮಲ್ಲಣ್ಣ ಪಟ್ಟಣಶೆಟ್ಟಿ, ಡಾ. ಐ.ಐ.ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಸಂಘಟಕ ಕುಮಾರಸ್ವಾಮಿ ಬಳ್ಳಾರಿ ಸ್ವಾಗತಿಸಿದರು. ಎಸ್.ಎಸ್. ತಳ್ಳಿಹಾಳ ನಿರೂಪಿಸಿದರು. ವಿ.ಬಿ. ನಂಜೇಗೌಡ್ರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement