ನಾಳೆ ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ ಸಭೆ
ಮುಂಡರಗಿ: ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಡಿ. 10ರಂದು ಮಧ್ಯಾಹ್ನ 3ಗಂಟೆಗೆ ತಾಲೂಕು ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ ಸಭೆ ಕರೆಯಲಾಗಿದೆ. ಈಗಾಗಲೆ ಪದಾಧಿಕಾರಿಗಳ ಅವಧಿ ಮುಗಿದಿದ್ದು, ಅಂದಿನ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರುಗಲಿದೆ. ಅಂದು ಎಲ್ಲರೂ ಸಭೆಗೆ ತಪ್ಪದೆ ಆಗಮಿಸಬೇಕು ಎಂದು ಕಾರ್ಯದರ್ಶಿ ಎಸ್.ಬಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9986850594ಗೆ ಸಂಪರ್ಕಿಸಲು ಕೋರಲಾಗಿದೆ.