ಬಿಜೆಪಿ ಜಿಲ್ಲಾಧ್ಯಕ್ಷ ಕಳಕಪ್ಪ ಬಂಡಿ ಗೈರು: ಅಸಮಾಧಾನ
ದೇಶದಲ್ಲಿಯೇ ಬಿಜೆಪಿ ಪಾಲಿಗೆ ಅವಿಸ್ಮರಣೀಯ ದಿನವಾದ ಭಾನುವಾರ 4 ರಾಜ್ಯಗಳ ಫಲಿತಾಂಶ ಪ್ರಕಟವಾಗಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿದ್ದಾರೆ. ಸದ್ಯದಲ್ಲಿಯೇ ಲೋಕಸಭಾ ಚುನಾವಣೆ ಎನ್ನುವ ಸವಾಲನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತರೊಂದಿಗೆ ಇದ್ದು ಅವರಲ್ಲಿ ಮತ್ತಷ್ಟು ಹುಮ್ಮಸ್ಸು ತುಂಬಬೇಕಾದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಹಾಜರಾಗದೇ ಇರುವುದು ನೆರೆದವರ ಅಸಮಾಧಾನಕ್ಕೆ ಕಾರಣವಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಲವಾರು ಹೋರಾಟಗಳಲ್ಲಿಯೂ ಇದೇ ರೀತಿಯ ಭಾವನೆಯನ್ನು ತೋರ್ಪಡಿಸುತ್ತಿದ್ದಾರೆ. ಇದು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದಿನ ಅಧ್ಯಕ್ಷರೇ ಇಂದಿಗೂ ಸಕ್ರಿಯವಾಗಿ ಕಾರ್ಯಕರ್ತರೊಂದಿಗಿದ್ದಾರೆ ಎಂದು ಪಕ್ಷದ ಪ್ರಮುಖ ಕಾರ್ಯಕರ್ತರು ಮಾತನಾಡುತ್ತಿರುವುದು ಸಾಮಾನ್ಯವಾಗಿತ್ತು.