ತರಬೇತಿಗೆ ಅರ್ಜಿ ಆಹ್ವಾನ
ಗದಗ: 2013-14ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದ ಒಳಗೆ ಕಾನೂನು ಪದವಿ ಹೊಂದಿರಬೇಕು. ತರಬೇತಿಯ ಅವಧಿಯು 4 ವರ್ಷಗಳಾಗಿದ್ದು, ಅರ್ಜಿ ನಮೂನೆಗಳನ್ನು ಕಚೇರಿಯ ವೇಳೆಯಲ್ಲಿ ಪಡೆದು ಅರ್ಜಿಯ ಜತೆಗೆ ಅಂತಿಮ ವರ್ಷದ ಕಾನೂನು ಪದವಿಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಣಿ ಪ್ರಮಾಣ ಪತ್ರ ಇತ್ಯಾದಿಗಳನ್ನು ಲಗತ್ತಿಸಿ ಅರ್ಜಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಆಡಳಿತ ಭವನ, ರೂ. ನಂ. 107, ಮೊದಲನೇ ಮಹಡಿ, ಹುಬ್ಬಳ್ಳಿ ರೋಡ್ ಗದಗ ಇವರಿಗೆ ಡಿ. 26ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಗದಗ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.