ಸಮ್ಮೇಳನಕ್ಕೆ ಆಹ್ವಾನ
ಗದಗ: ಧಾರವಾಡದಲ್ಲಿ ಡಿ. 27 ರಿಂದ 29 ರವರೆಗೆ ನಡೆಯಲಿರುವ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿಚ್ಛಿಸುವವರು ರು. 100 ಪ್ರತಿನಿಧಿ ಶುಲ್ಕವನ್ನು ತುಂಬಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಗದಗ ತಾಲೂಕು ಕದಳಿ ವೇದಿಕೆಯ ಅಧ್ಯಕ್ಷೆ ಕವಿತಾ ದಂಡಿನ (9538419782) ಅಥವಾ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅ.ಓಂ. ಪಾಟೀಲ (9448088672) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಗದಗ ತಾಲೂಕು ಕದಳಿ ಮಹಿಳಾ ವೇದಿಕೆಯ ಪ್ರಕಟಣೆ ತಿಳಿಸಿದೆ.