ಕ್ರೀಡಾಪಟುಗಳಿಗೆ ತರಬೇತಿ ಅವಶ್ಯ: ಶಾಸಕ ರಾಮಕೃಷ್ಣ ದೊಡ್ಡಮನಿ
ಲಕ್ಷ್ಮೇಶ್ವರ: ಕ್ರೀಡೆಗಳು ಮನುಷ್ಯನ ದೇಹವನ್ನು ಸದೃಢಗೊಳಿಸಬಲ್ಲವು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಭಾನುವಾರ ಪಟ್ಟಣದ ಉಮಾ ವಿದ್ಯಾಲಯದಲ್ಲಿ ಗದಗ ಜಿಪಂನ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ತಾಪಂ ಶಿರಹಟ್ಟಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾ ಅನ್ವೇಷಣಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ತರಬೇತಿಗಳು ಮನುಷ್ಯನ ಜೀವನದಲ್ಲಿ ಮಹತ್ತರ ಬದಲಾವಣೆ ತರಬಲ್ಲವು. ಎಂದರು. ಜಿಪಂನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕಿರಸ್ವಾಮಿಮಠ, ಗದಗ ಜಿಲ್ಲಾ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕ ಶಂಕರ ಹಾಗೂ ತಾಲೂಕು ದೈಹಿಕ ಶಿಕ್ಷಾಣಾಧಿಕಾರಿ ಎಂ.ಡಿ. ತಳ್ಳಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಸುನಂದಮ್ಮ ಬಿದರಳ್ಳಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ನಿರ್ಮಲಾ ಬರದೂರ, ಪುರಸಭೆಯ ಉಪಾಧ್ಯಕ್ಷ ಎಂ.ಆರ್. ಪಾಟೀಲ, ಪುರಸಭೆ ಸದಸ್ಯ ಶಂಕ್ರಮ್ಮ ಕರಡಿ, ಅನಿಲ ಮುಳಗುಂದ, ಮುಖ್ಯೋಪಾಧ್ಯಾಯೆ ಎಸ್.ಸಿ. ಅಳಗವಾಡಿ, ತರಬೇತುದಾರ ರಾಜೀವ ಪತ್ತಾರ, ಸುರೇಶ ಮಾಗಡಿ ಮುಂತಾದವರು ಹಾಜರಿದ್ದರು. ಎಂ.ವೈ. ಜನಿವಾರದ ನಿರೂಪಿಸಿದರು. ಎಂ.ಡಿ. ತಳ್ಳಳ್ಳಿ ಸ್ವಾಗತಿಸಿದರು. ಶಿಕ್ಷಕ ಮುದಗಲ್ ವಂದಿಸಿದರು.