ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ: ಪ್ರತಿಭಟನೆ

Lingaraj Badiger
Updated On : 16 Dec 2013, 11:31 am

ಗಜೇಂದ್ರಗಡ: ಪಟ್ಟಣದ ಪೊಲೀಸ್ ಠಾಣೆ ಬಳಿ ಇರುವ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರ ಸ್ಥಳಾಂತರಿಸಿ, ಕೂಡಲೇ ಅಂಗನವಾಡಿ ಕೇಂದ್ರದ ದುರಸ್ತಿಗೆ ಮುಂದಾಗಬೇಕೆಂದು ಆಗ್ರಹಿಸಿ ಶನಿವಾರ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಗಣೇಶ ಗುಗಲೋತ್ತರ ಮಾತನಾಡಿ,  ಮಕ್ಕಳ ಕಲಿಕೆಗೆ ಅಗತ್ಯವಾದ ಮೂಲ ಸೌಲಭ್ಯ ಒದಗಿಸುವ ಬದಲು ಕಾಟಾಚಾರದ ಅಂಗನವಾಡಿ ಕೇಂದ್ರ ತೆರೆದು ಇಲಾಖೆ ಕೈತೊಳೆದುಕೊಂಡಿದೆ ಎಂದು ಆರೋಪಿಸಿದರು. ಈ ಕೂಡಲೇ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರದ ದುರಸ್ತಿ ಜತೆಗೆ ಮೂಲ ಸೌಲಭ್ಯ ಒದಗಿಸಲು ಮುಂದಾಗದಿದ್ದಲ್ಲಿ ಸಂಘಟನೆ ವತಿಯಿಂದ ಬೀದಿಗಿಳಿದು ಉಗ್ರ ಪ್ರತಿಭಟನೆ ಮಾಡುವುದು ಅನಿವಾರ್ಯ ಎಂದರು. ಪ್ರತಿಭಟನೆಯಲ್ಲಿ ಮಹ್ಮದಗೌಸ ಮುಲ್ಲಾ, ಬೀಬಿಜಾನ ಮುಜಾವರ, ನಂದಾ ಮನ್ನೇರಾಳ, ಆಶಾ ಓಲಿ ಮುಂತಾದವರು ಉಪಸ್ಥಿತರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement