ಬ್ಯಾಂಕ್ ನೌಕರರ ಪ್ರತಿಭಟನೆ
ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬುಧವಾರ ದೇಶಾದ್ಯಂತ ನಡೆದ ರಾಷ್ಟ್ರೀಕೃತ ಬ್ಯಾಂಕ್‌ಗಳ ನೌಕರರ ಮುಷ್ಕರವನ್ನು ಬೆಂಬಲಿಸಿ ಜಿಲ್ಲೆಯ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ನ ನೌಕರರು ನಗರದ ಗಾಂಧಿವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.
ಬ್ಯಾಂಕ್ ನೌಕರರ ವಿವಿಧ ಬೇಡಿಕೆಗಳಾದ ವೇತನ ಪರಿಷ್ಕರಣೆ, ಅನಪೇಕ್ಷಿತ ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಬ್ಯಾಂಕ್ ನೌಕರರು ನಡೆಸಿದ ಮುಷ್ಕರದಿಂದಾಗಿ ಬಂದ್ ಮಾಡಲಾಗಿದ್ದ ಬ್ಯಾಂಕ್‌ಗಳಿಂದಾಗಿ ಗ್ರಾಹಕರು ತೀವ್ರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಬಹುತೇಕ ಬ್ಯಾಂಕ್‌ಗಳು ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿದ್ದವು. ಅಲ್ಲದೇ, ಕೆಲವು ಎಟಿಎಂ ಗಳಲ್ಲಿ ಹಣ ಖಾಲಿಯಾಗಿದ್ದರಿಂದ ಹಣ ಪಡೆಯಲು ಹರಸಾಹಸ ಪಡುವ ದೃಶ್ಯ ಸಾಮನ್ಯವಾಗಿ ಕಂಡುಬಂದಿತು. ಎಂದಿನಂತೆ ಖಾಸಗಿ ಬ್ಯಾಂಕ್‌ಗಳು ತನ್ನ ಸೇವೆಯನ್ನು ಮುಂದುವರೆಸಿದ್ದವು. ಪ್ರತಿಭಟನೆಯಲ್ಲಿ ಎ.ಎಸ್. ಕುಲಕರ್ಣಿ, ಬಿ.ಎಚ್. ಬಡಿಗಣ್ಣವರ, ಗಾಯಕವಾಡ, ಮಾಳಗೊಂಡ, ಪಿ.ಎಸ್. ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.