ಕಲೆ, ಸಂಸ್ಕೃತಿಗೆ ಹೆಚ್ಚು ಒತ್ತು ನೀಡಿ: ಹಿರೇಮಠ
ರೋಣ: ತಂತ್ರಜ್ಞಾನ ಯುಗದಲ್ಲಿಯೂ ಕೂಡ ಗ್ರಾಮೀಣ ಪ್ರದೇಶದಲ್ಲಿ ಸಹ ಇನ್ನೂ ಜಾನಪದ, ನಾಟಕ ಹಾಗೂ ಸಂಗೀತ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಿದ್ದಯ್ಯ ಹಿರೇಮಠ ಅಭಿಪ್ರಾಯ ಪಟ್ಟರು.
ಈಚೆಗೆ ತಾಲೂಕಿನ ಸಂದಿಗವಾಡ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಂಪ್ಯೂಟರ್ ಹಾಗೂ ಮೊಬೈಲ್ ಯುಗದಲ್ಲೂ ಜನರು ನಮ್ಮ ಕಲೆ, ಸಂಸ್ಕೃತಿಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಮಹತ್ವ ನೀಡಿದೆ ಎಂದರು. ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಮಹಾದೇವಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಈವಾಗ ಸುಗ್ಗಿ ಕಾಲ ರೈತರು ತಮ್ಮ ಹೊಲದಲ್ಲಿ ಕೆಲಸ ಮಾಡಿ ತಮ್ಮ ಬಿಡುವಿನ ವೇಳೆಯಲ್ಲಿ ಇಂತಹ ಕಾರ್ಯಕ್ರಮದಲ್ಲಿ ಉತ್ಸಾಹ ತೋರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಪಿಪಿಜಿ ಸಂಗೀತ ಮಹಾವಿದ್ಯಾಲಯದ ಉಪನ್ಯಾಸಕ ವಿಶ್ವನಾಥ ಹಿರೇಮಠ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಸದಸ್ಯ ಧರ್ಮಣ್ಣ ಬೂಸನಗೌಡ್ರ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಸದಸ್ಯ ಬಸಪ್ಪ ಡೊಳ್ಳಿನ, ಶಂಕ್ರಪ್ಪ ಜಾಲಿಹಾಳ, ದ್ಯಾಮಣ್ಣ ಬಡಿಗೇರ ಇತರರು ಉಪಸ್ಥಿತರಿದ್ದರು.