ತರಬೇತಿಗೆ ಅರ್ಜಿ ಆಹ್ವಾನ
ಗದಗ: ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೂಲಕ ಬೆಂಗಳೂರಿನ ಹಿಂದುಸ್ಥಾನ ಎರೋನಾಟಿಕ್ಸ್ ಸಂಸ್ಥೆಯಲ್ಲಿ 2014ರ ಸಾಲಿನ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಪಾಸಾಗಿ ಐಟಿಐ ಫಿಟ್ಟರ್, ಟರ್ನರ್, ಮಶಿನಿಸ್ಟ್, ಇಲೆಕ್ಟ್ರಿಶಿಯನ್, ಕಾರ್ಪೇಂಟರ್, ಶೀಟ್ಮೆಟಲ್, ಮೆಕ್ಯಾನಿಕ್ ವೃತ್ತಿಗಳಲ್ಲೊಂದನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಡಿ. 26 ಕೊನೆಯ ದಿನವಾಗಿದ್ದು, ನಿಗದಿತ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ತಮ್ಮ ಕಚೇರಿಯನ್ನು ಸಂಪರ್ಕಿಸಲು ಗದಗ ಜಿಲ್ಲಾ ಉದ್ಯೋಗಾಧಿಕಾರಿ ಅನಿಲ ಕರ್ನಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.