ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ

Mainashree
Updated On : 23 Dec 2013, 11:10 am

ರೋಣ:  ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆ ಅತ್ಯಗತ್ಯವಾಗಿದೆ. ಆ ದಿಸೆಯಲ್ಲಿ ಶಾಲಾ ಹಂತದಲ್ಲಿ ಮಕ್ಕಳಿಗೆ ವೇದಿಕೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷೆ ಕುಸುಮಾ ಕತ್ತಿ ಹೇಳಿದರು.
ಅವರು ಶನಿವಾರ ತಾಲೂಕಿನ ಸವಡಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯ ಅಧಿಕಾರಿಗಳು ಮತ್ತು ಸಮೂಹ ಸಂಪನನ್ಮೂಲ ಕೇಂದ್ರ ಸವಡಿ ಇವರ ಆಶ್ರಯದಲ್ಲಿ ಜರುಗಿದ ಕ್ಲಸ್ಟರ್ ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಸದಾ ಕ್ರಿಯಾಶೀಲತೆಯಿಂದ ಪಾಲ್ಗೊಳ್ಳಬೇಕು. ಮಕ್ಕಳನ್ನು ಕ್ರಿಯಾತ್ಮಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೇರಣೆ ಮತ್ತು ಮಾರ್ಗದರ್ಶನ ನೀಡುವುದು ಅತ್ಯಗತ್ಯವಾಗಿದೆ ಎಂದರು. ಕಲಿಕೋತ್ಸವದಲ್ಲಿ ಕ್ಲಸ್ಟರ್ ವ್ಯಾಪ್ತಿಯ ಅರಹುಣಸಿ, ಬಾಸಲಾಪುರ, ಸಂದಿಗವಾಡ, ಚಿಕ್ಕಮಣ್ಣೂರ, ಹೊನ್ನಾಪುರ, ಹಡಗಲಿ, ಗುಜಮಾಗಡಿ ಶಾಲೆಗಳ ಮಕ್ಕಳು ಕಲಿಕೋತ್ಸವದಲ್ಲಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕೆ.ಎಸ್. ಪರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸುಧಾ ದಂಡಿನ, ರಾಜಣ್ಣ ಪರಡ್ಡಿ, ಹುಸೇನಲಿ ಸೋಟಕನಾಳ, ರಮಜಾನಬೀ ತಳ್ಳಿಹಾಳ, ಈಶಪ್ಪ ಜೋಗರಡ್ಡಿ, ಸಂಗಮೇಶ ಮಣ್ಣೂರ ಸೇರಿದಂತೆ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement