ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

Mainashree
Updated On : 24 Dec 2013, 10:41 am

ಗದಗ: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2013ನ್ನು ಡಿ. 24ರ ಮಧ್ಯಾಹ್ನ 12.30ಕ್ಕೆ ನಗರದ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಬಿ. ದುರ್ಗಪ್ಪ ಅಧ್ಯಕ್ಷತೆ ವಹಿಸುವರು.
ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಉದ್ಘಾಟಿಸುವರು. ಅತಿಥಿಗಳಾಗಿ ಸಿಇಒ ವೀರಣ್ಣ ಜಿ. ತುರಮರಿ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ ಆಗಮಿಸುವರು.  ನ್ಯಾಯವಾದಿ ಎಸ್.ಕೆ. ಪಾಟೀಲ ಉಪನ್ಯಾಸ ನೀಡುವರು. ಅಪರ ಜಿಲ್ಲಾಧಿಕಾರಿ ನಾಗರಾಜ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎನ್.ಬಿ. ಮಾರನಬಸರಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕ ಅಶೋಕ ಕಲಘಟಗಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement