ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸುದ್ದಿ ಸಂಕ್ಷೇಪ

Mainashree
Updated On : 24 Dec 2013, 10:41 am

ಇಂದು ದಿನದರ್ಶಿಕೆ ಬಿಡುಗಡೆ
ಗದಗ: ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದ ಆಶ್ರಯದಲ್ಲಿ ಡಿ. 24ರ ಮಧ್ಯಾಹ್ನ 3ಕ್ಕೆ ನಗರದ ಸಚ್ಚಿದಾನಂದ ಮಠದ ಸಭಾಂಗಣದಲ್ಲಿ 2014ರ ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ದಿನದರ್ಶಿಕೆಯನ್ನು ಸಂಸದ ಶಿವಕುಮಾರ ಉದಾಸಿ ಬಿಡುಗಡೆಗೊಳಿಸುವರು. ಸಂಘದ ಅಧ್ಯಕ್ಷ ಎಸ್.ಸಿ. ಗಾಣಿಗೇರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಎ.ಎನ್. ನಾಗರಳ್ಳಿ, ಎಸ್.ಎನ್. ಖಾಜಿ, ಎಸ್.ವೈ. ಯಾಳಗಿ, ಕೆ.ಐ. ಕುರಗೋಡ, ಜಿ.ಎಂ. ಯಾಮನಶೆಟ್ಟಿ ಮುಂತಾದವರು ಉಪಸ್ಥಿತರಿರುವರು.
ಪತ್ರಕರ್ತರ ಸದಸ್ಯತ್ವ ನವೀಕರಣ
ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2014ನೇ ಸಾಲಿನ ಪತ್ರಕರ್ತರ ಸದಸ್ಯತ್ವ ನವೀಕರಣ ಆರಂಭವಾಗಿದ್ದು, ಡಿ. 31ರೊಳಗಾಗಿ ಗದಗ ಜಿಲ್ಲೆಯ ಎಲ್ಲ ಪತ್ರಕರ್ತರೂ ಗದಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗದೀಶ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಟಿ.ಎನ್. ಭಾಂಡಗೆ ಇವರಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಆ ಅರ್ಜಿಯೊಂದಿಗೆ ಸಂಪಾದಕರ ನೇಮಕ ಪತ್ರದ ಝೆರಾಕ್ಸ್ ಪ್ರತಿ, 2 ಪೋಟೋ ಹಾಗೂ ರು. 170 ಶುಲ್ಕವನ್ನು ನೀಡಿ ಸದಸ್ಯತ್ವ ನವೀಕರಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9448424908, 9945011710 ಇಲ್ಲಿಗೆ ಸಂಪರ್ಕಿಸುವಂತೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎನ್.ಭಾಂಡಗೆ  ತಿಳಿಸಿದ್ದಾರೆ.
ಇಂದು ಕಾವ್ಯ ಕಮ್ಮಟ
ಗದಗ:  ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಾಹಿತ್ಯ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ಡಿ. 24ರಂದು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕಾವ್ಯ ಮತ್ತು ನಾಟಕ ರಚನಾ ಕಮ್ಮಟವನ್ನು ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಶಾಲೆಯಲ್ಲಿ ಆಯೋಜಿಸಲಾಗಿದೆ. ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಆಯುಕ್ತ ವೆಂಕಟೇಶ್ವರ ಮಾಚಕನೂರ ಉದ್ಘಾಟಿಸುವರು. ವಿಜಾಪುರದ ಜಂಬುನಾಥ ಕಂಚ್ಯಾಣಿ, ಧಾರವಾಡದ ರಂಗಯಾಣದ ಸಂಪನ್ಮೂಲ ವ್ಯಕ್ತಿ ಸುನಂದಾ ನಿಂಬನಗೌಡರ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಣ್ಣ ಕುರಿ  ಪಾಲ್ಗೊಳ್ಳುವರು. ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ ಶಿಕ್ಷಕರಿಗೆ ಕಾವ್ಯ ಮತ್ತು ನಾಟಕ ರಚನೆ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡುವುದರೊಂದಿಗೆ ಸಾಹಿತ್ಯ ಮತ್ತು ಬರವಣಿಗೆಗೆ ಪ್ರೋತ್ಸಾಹ ನೀಡುವುದು ಈ ಕಮ್ಮಟದ ಉದ್ದೇಶವಾಗಿದೆ. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement