ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸರ್ಕಾರದ ಯೋಜನೆ ಸಾಕಾರಗೊಳ್ಳಲಿ

Vishwanath S
Updated On : 26 Dec 2013, 11:10 am

ಕನ್ನಡಪ್ರಭ ವಾರ್ತೆ, ನರಗುಂದ, ಡಿ. 25
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಗ್ರಾಮೀಣ ಜನರ ಬದುಕಿನ ಸುಧಾರಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ತಾಪಂ ಅಧಿಕಾರಿ ನಂದಕುಮಾರ ಗುಂಡಾ ಹೇಳಿದರು.
ಅವರು ಪಟ್ಟಣದ ತಾಪಂ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಒಂದು ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಉದ್ಯೋಗ ಭರವಸೆ ಇದೆ. ಇದಕ್ಕೆ ಬೇಕಾಗುವ ಉದ್ಯೋಗ ಚೀಟಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಸರಳವಾದ ರೀತಿಯಲ್ಲಿ ಹೊಂದಬಹುದಾಗಿದೆ. ದಿನಕ್ಕೆ ರು. 174 ರಂತೆ ಕೂಲಿ ನೀಡಲಾಗುವುದು. ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕುರಿ ದಡ್ಡಿ, ಎರೆ ಹುಳು ಗೊಬ್ಬರ ಘಟಕ, ಶೌಚಾಲಯ ನಿರ್ಮಾಣ, ಕಾಂಪೋಸ್ಟ್ ಘಟಕ, ಕೋಳಿ ಸಾಕಾಣಿಕೆ ಶೆಡ್ ಹಾಗೂ ಭೂ ಅಭಿವೃದ್ಧಿ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡ, ಅರಣ್ಯೀಕರಣ, ತೋಟಗಾರಿಕೆ ಇತ್ಯಾದಿ ಉದ್ಯೋಗಗಳನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.
ತಾಲೂಕಿನ ವ್ಯಾಪ್ತಿಯಲ್ಲಿ 2013-14ನೇ ಸಾಲಿಗೆ 3960 ಶೌಚಾಲಯಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಕ್ಕಾಗಿ ಗ್ರಾಮೀಣ ಜನರ ಮನ ಒಲಿಸಲು ಗ್ರಾಪಂ ಸಿಬ್ಬಂದಿಯವರು ಮನೆ-ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಮನವೂಲಿಸಿ ಶೌಚಾಲಯ ನಿರ್ಮಿಸಲು ನಮ್ಮ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement