ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಡಿ. 30
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಈಚೆಗೆ ಪಟ್ಟಣದಲ್ಲಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ಜರುಗಿತು.
ಯೋಜನೆ ಜಿಲ್ಲಾ ನಿರ್ದೇಶಕ ಜಯಂತ ಪೂಜಾರ ಅವರು ಕೇಂದ್ರ ಉದ್ಘಾಟಿಸಿ ಸಂಘದ ಸದಸ್ಯರು ಶಿಸ್ತು, ಸಮಯ ಪರಿಪಾಲನೆ ಬೆಳೆಸಿಕೊಳ್ಳಬೇಕು. ಇದರ ಜತೆಗೆ ಶೌಚಾಲಯ ಹೊಂದುವ ಬಗ್ಗೆ ತಿಳಿದುಕೊಳ್ಳಬೇಕು. ಸ್ವಯಂ ಉದ್ಯೋಗದ ಮುಖಾಂತರ ಆರ್ಥಿಕ ಸ್ವಾವಲಂಬನೆ ಬದುಕು ಸಾಗಿಸಲು ಮಹಿಳೆಯರು ಮುಂದೆ ಬರಬೇಕು ಎಂದು ಸಲಹೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹಿರಿಯ ನ್ಯಾಯವಾಧಿ ಅಶೋಕ ಮಡಿವಾಳರ ಮಾತನಾಡಿ, ಇಂದು ಮಹಿಳೆಯರಿಗಾಗಿಯೇ ವಿಶೇಷ ಕಾನೂನು ಜಾರಿಗೆ ಬಂದಿದ್ದು, ಅವುಗಳ ಕುರಿತು ಮಹಿಳೆಯರು ಸರಿಯಾಗಿ ತಿಳಿದುಕೊಳ್ಳುವುದು ಅಗತ್ಯ ಎಂದರು.
ಯೋಜನಾಧಿಕಾರಿ ಕೆ. ದಿವಾಕರ ಪ್ರಾಸ್ತಾವಿಕ ಮಾತನಾಡಿದರು. ಅಧ್ಯಕ್ಷತೆಯನ್ನು ನಿರ್ಮಲಾ ಅರಳಿ ವಹಿಸಿದ್ದರು. ಚೈತ್ರಾ ಹಣಗಿ, ಅಡಿವೆಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.
ಸೇವಾ ಪ್ರತಿನಿಧಿ ರಾಜೇಶ್ವರಿ ಸ್ವಾಗತಿಸಿದರು. ಎಸ್.ಸಿ. ಚೆನ್ನಮ್ಮ ನಿರೂಪಿಸಿದರು. ಶೋಭಾ ವಂದಿಸಿದರು.