ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಉತ್ಸವ ಲಕ್ಕುಂಡಿಗೆ ಸೀಮಿತವಾಗದಿರಲಿ

Lingaraj Badiger
Updated On : 5 Feb 2013, 11:35 am

ನರೇಗಲ್ಲ: ಲಕ್ಕುಂಡಿ ಉತ್ಸವವು ಕೇವಲ ಲಕ್ಕುಂಡಿಗೆ ಮಾತ್ರ ಸೀಮಿತವಾಗಿರದೇ, ಗದಗ ಜಿಲ್ಲೆಯ ಎಲ್ಲ ಐತಿಹಾಸಿಕ ಸ್ಥಳಗಳಲ್ಲಿ ಆಚರಿಸುವಂತಾಗಬೇಕು ಎಂದು ಸ್ಥಳೀಯ ಬಿಜೆಪಿ ಮುಖಂಡ ಬಸವರಾಜ ಕೊಟಗಿ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಪಂ ಮಾಜಿ ಅಧ್ಯಕ್ಷ ಶರಣಪ್ಪ ಕಲಾಲ ಬಂಡಿ ಮುಂತಾದವರು ಮಾತನಾಡಿದರು. ಈ ಸಂದರ್ಭದಲ್ಲಿ ಶಶಿಧರ ಸಂಕನಗೌಡ್ರ, ಪಪಂ ಸದಸ್ಯ ಭೀಮಪ್ಪ ಹನುಮಸಾಗರ, ವಿರುಪಾಕ್ಷಗೌಡ ಮಲ್ಲನಗೌಡ್ರ, ಪಪಂ ಸದಸ್ಯೆ ಅನಸೂಯಾ ಸೋಮಗೊಂಡ, ಬಸಮ್ಮ ಧರ್ಮಾಯತ ಮುಂತಾದವರು ಉಪಸ್ಥಿತರಿದ್ದರು.
ನಾಳೆ ವಿದ್ಯುತ್ ವ್ಯತ್ಯಯ
ಗದಗ: ಗದಗ ಶಹರ, ಹುಲಕೋಟಿ ಹಾಗೂ ಲಕ್ಕುಂಡಿಯಿಂದ ಪೂರೈಕೆಯಾಗುತ್ತಿರುವ ಎಲ್ಲ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಫೆ. 6ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement