ಗದಗ

ಇಂದು ಗ್ರಂಥ ಬಿಡುಗಡೆ

ನರಗುಂದ: ಪಟ್ಟಣದ ಬಸವೇಶ್ವರ ಸಮುದಾಯ ಭವನ ಆವರಣದಲ್ಲಿ ಫೆ. 6ರ ಸಂಜೆ 7 ಗಂಟೆಗೆ ನೀಲಿ ಕುದುರೆ ನಾಟಕ ಪ್ರದರ್ಶನ ಹಾಗೂ ನರಗುಂದ ಕುರಿತು ಜಾನಪದ ಗೀತೆಯ ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ. ಶಾಂತಲಿಂಗ ಶ್ರೀಗಳು ಸಾನ್ನಿಧ್ಯ ವಹಿಸುವರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಚನ್ನಬಸಪ್ಪ ಕಂಠಿ, ಡಾ. ಶಿವಾನಂದ ಗಾಳಿ, ಡಾ. ಅರ್ಜುನ ಗೊಳಸಂಗಿ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸಿ.ಎಚ್. ಕೋರಿ, ಜಿ.ಬಿ. ಕುಲಕರ್ಣಿ, ರಮೇಶಗೌಡ ಕರಕನಗೌಡ್ರ, ಬಸವಕೇಂದ್ರ ಮತ್ತು ಮುರುಘರಾಜೇಂದ್ರ ಫ್ರೀ ಬೋರ್ಡಿಂಗ್ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಕಾನೂನು ಸಾಕ್ಷರತಾ ಕಾರ್ಯಕ್ರಮ
ನರಗುಂದ: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತಾಲೂಕು ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ಫೆ. 6ರಂದು ಕಾನೂನು ಅರಿವು ಕುರಿತು ಸಾಕ್ಷರತಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾ ನ್ಯಾಯಾಧೀಶ ಟಿ.ಎಚ್. ಆವೀನ, ಪಿ.ಎಫ್. ಸೋಲಾಪುರಿ, ದಿವಾಣಿ ನ್ಯಾಯಾಧೀಶ ಎಲ್.ಆರ್. ಕುರಣೆ, ನ್ಯಾಯವಾದಿ ಬಿ.ಎಸ್. ಪಾಟೀಲ, ಎಂ.ಟಿ. ಪಾಟೀಲ, ಎಫ್.ವೈ. ದೊಡಮನಿ, ಸಿಪಿಐ ಪ್ರಶಾಂತ ಸಿದ್ದನಗೌಡ್ರ, ಶಿಕ್ಷಣಾಧಿಕಾರಿ ಬಿ.ವಿ. ಪಾಟೀಲ, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಟಿ. ಅಸೂಟಿ, ವಿ.ಎಸ್.ದೇಶಪಾಂಡೆ, ಬಿ.ಎನ್. ಬೋಸಲೆ, ಎಸ್.ಕೆ. ಹರಪನಹಳ್ಳಿ, ವಿ.ಎಸ್. ದೇಶಪಾಂಡೆ ಭಾಗವಹಿಸುವರು ಎಂದು  ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!