ನಾಳೆ ಪೌರಸೇವಾ ನೌಕರರ ಸಭೆ
ಗದಗ: ಸ್ಥಳೀಯ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಗಾರ್ಡನ್‌ನಲ್ಲಿ ಫೆ. 9ರಂದು ಬೆಳಗ್ಗೆ 11 ಗಂಟೆಗೆ ಗದಗ ಜಿಲ್ಲಾ ನಿವೃತ್ತ ಪೌರಸೇವಾ ನೌಕರರ ಸಂಘದ ಕಾರ್ಯಕಾರಿ ಸಮಿತಿಯ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಎನ್. ಶಿಂಗಾಡಿ ವಹಿಸುವರು. ಸಭೆಯಲ್ಲಿ ಪೌರಸೇವಾ ಪಿಂಚಣಿದಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಕಾರಣ ಜಿಲ್ಲೆಯಲ್ಲಿನ ಎಲ್ಲ ನಗರ, ಪುರಸಭೆ, ಪಪಂಗಳ ವ್ಯಾಪ್ತಿಯಲ್ಲಿನ ಕಾರ್ಯಕಾರಿ ಸಮಿತಿಯ ಸದಸ್ಯರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಸಭೆಗೆ ಆಗಮಿಸುವಂತೆ ಕಾರ್ಯದರ್ಶಿ ಎಂ.ವಿ. ಹೂಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪಘಾತ: ಓರ್ವ ಸಾವು
ಮುಂಡರಗಿ: ತಾಲೂಕಿನ ಬರದೂರು-ಗದಗ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಮೃತನನ್ನು ಸುಬ್ಬಾರಾಮರಡ್ಡಿ (55) ಎಂದು ಗುರುತಿಸಲಾಗಿದ್ದು, ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.