ಗದಗ

ಲಕ್ಷ್ಮೇಶ್ವರ: ಮುಗಿಲು ಮುಟ್ಟಿದ ಸಂಭ್ರಮ

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣವನ್ನು ತಾಲೂಕಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಪಟ್ಟಣ ಜನತೆ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಪರವಾಗಿ ಲಕ್ಷ್ಮೇಶ್ವರ ತಾಲೂಕು ಹೋರಾಟ ಸಮಿತಿಯು ಶುಕ್ರವಾರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ಅಭಿನಂದನೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಹಲವು ವರ್ಷಗಳಿಂದಲೂ ತಾಲೂಕಿಗಾಗಿ ಮಾಡಿದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದ್ದು, ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಸಚಿವ ಕಳಕಪ್ಪ ಬಂಡಿಯವರಿಗೆ ಅಭಿನಂದನೆ. ಲಕ್ಷ್ಮೇಶ್ವರ ತಾಲೂಕಾಗಲು ಎಲ್ಲ ಅರ್ಹತೆ ಹೊಂದಿದ್ದರೂ ಯಾವುದೋ ಕಾರಣಗಳಿಂದ ತಾಲೂಕು ಕೇಂದ್ರವಾಗಲು ಹಿನ್ನಡೆ ಉಂಟಾಗಿತ್ತು. ಸುಮಾರು 40 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ತಾಲೂಕು ರಚನೆಗಾಗಿ ಹೋರಾಟ ಮಾಡಿದ ಅನೇಕ ಹಿರಿಯರನ್ನು ಮಾಜಿ ಶಾಸಕರನ್ನು ಸ್ಮರಿಸಿದರು. ಪುರಸಭೆಯ ಮಾಜಿ ಅಧ್ಯಕ್ಷ ಎನ್.ಜಿ. ಹೊಂಬಳ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಪುರಸಭೆಯ ಅಧ್ಯಕ್ಷೆ ಜಯಕ್ಕ ಕಳ್ಳಿ, ಸಣ್ಣೀರಪ್ಪ ಹಳ್ಳೆಪ್ಪನವರ, ಕುಬೇರಪ್ಪ ಮಹಾಂತಶೆಟ್ಟರ, ಚೆಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ಚೆನ್ನಪ್ಪ ಜಗಲಿ, ವಿ.ಜಿ. ಪಡಗೇರಿ. ಎಂ.ಎಂ. ಅಗಡಿ, ಮಹೇಶ ಹೊಗೆಸೊಪ್ಪಿನ, ಸೋಮನಗೌಡ ಪಾಟೀಲ, ಜಗದೀಶ ಪುರಾಣಿಕಮಠ, ನಿಂಗಪ್ಪ ಬನ್ನಿ, ಎಲ್.ಸಿ. ಲಿಂಬಯ್ಯಸ್ವಾಮಿಮಠ, ಬಸವರಾಜ ಬಾಳೇಶ್ವರಮಠ. ಚಂದ್ರು ಹಂಪಣ್ಣವರ. ಶರಣು ಗೋಡಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್