ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಶುದ್ಧ ನೀರಿನಿಂದ ಸುಖಿ ವಿದ್ಯಾರ್ಥಿ: ಬಸವರಾಜ

Parashurama
Updated On : 10 Feb 2013, 11:30 am

ಕನ್ನಡಪ್ರಭ ವಾರ್ತೆ, ಮುಂಡರಗಿ, ಫೆ. 9
ಶುದ್ಧ ನೀರಿನಿಂದ ಮಾತ್ರ ವಿದ್ಯಾರ್ಥಿಗಳು ಸುಖಿಯಾಗಿ ಜ್ಞಾನಾರ್ಜನೆ ಮಾಡಲು ಸಾಧ್ಯ ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ವ್ಯವಸ್ಥಾಪಕ ಆರ್.ಕೆ. ಬಸವರಾಜ ಹೇಳಿದರು.
ಸ್ಥಳೀಯ ತೋಂಟದಾರ್ಯ ಸಿಬಿಎಸ್‌ಇ ಶಾಲೆಯಲ್ಲಿ ಜರುಗಿದ ಪಾಲಕರ ಸಮಾವೇಶದಲ್ಲಿ ಪಾಲ್ಗೊಂಡು ನೀರಿನ ಶುದ್ಧೀಕರಣ ಸಾಧನಗಳನ್ನು ವಿತರಿಸಿದ ಅವರು, ವಿದ್ಯಾರ್ಥಿಯ ಶಿಕ್ಷಣಕ್ಕೂ ಕುಡಿವ ನೀರಿಗೂ ಸಂಬಧವಿದೆ. ಶುದ್ಧ ನೀರಿನಿಂದ ವಿದ್ಯಾರ್ಥಿಗಳು ಆರೋಗ್ಯವಂತರಾಗುತ್ತಾರೆ. ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಹೀಗಾಗಿ, ಸ್ಟೇಟ್ ಬ್ಯಾಂಕ್ ಸಮೂಹ ಶಾಲೆಗಳಿಗೆ ನೀರು ಶುದ್ಧೀಕರಣ ಸಾಧನಗಳನ್ನು ವಿತರಿಸುತ್ತಿದೆ ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳು ಸಾಧನೆಯಲ್ಲಿ ಹಿಂದಿಲ್ಲ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಪಾಲಕರು ಪ್ರೇರಿಪಿಸಬೇಕು ಎಂದರು.
ಅತಿಥಿಗಳಾಗಿದ್ದ ಸಾಹಿತಿ ಡಾ೤ ನಿಂಗು ಸೊಲಗಿ ಮಾತನಾಡಿ, ಮಕ್ಕಳಿಗೆ ಕೇವಲ ಓದಿನ ಬಗ್ಗೆ ಒತ್ತಡ ಹೇರದೆ ಸೃಜನಶೀಲರಾಗಿ ಬೆಳೆಯುವಂತೆ ಅವಕಾಶ ಕಲ್ಪಿಸಿಕೊಡಬೇಕೆಂದು ಪಾಲಕರಿಗೆ ಮನವಿ ಮಾಡಿದರು.
ಪ್ರಾಚಾರ್ಯ ಮಹೇಶ ಮಾಲಗಿತ್ತಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಚಾರ್ಯೆ ಜ್ಯೋತಿ ನಾಯ್ಕ, ಆರ್.ಟಿ.ದೇವರಡ್ಡಿ, ಎ.ಕೆ. ಮುಲ್ಲಾನವರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments