ಸಮರ್ಪಕ ಕುಡಿವ ನೀರು ಪೂರೈಸಿ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಫೆ. 9
ಪಟ್ಟಣದ ಕೆಲ ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದ್ದು, ಕೂಡಲೇ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶನಿವಾರ ಜೆಡಿಎಸ್ ಮುಖಂಡರು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡ ಶರಣಪ್ಪ ರೇವಡಿ ಮಾತನಾಡಿ, ಇದೀಗ ಬೇಸಿಗೆ ಪ್ರಾರಂಭವಾಗುತ್ತಿದ್ದು, ಪಟ್ಟಣದ ಜನತೆ ಕುಡಿವ ನೀರಿನ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ವ್ಯವಸ್ಥೆ ಮುಂದುವರಿದರೆ ಮುಂಬರುವ ದಿನಗಳಲ್ಲಿ ಈ ಸಮಸ್ಯೆಯು ಇನ್ನಷ್ಟು ಉಲ್ಭಣಗೊಳ್ಳಲಿದೆ. ಕೂಡಲೇ ಪುರಸಭೆ ಆಡಳಿತ ಕುಡಿವ ನೀರಿನ ಭವಣೆಯನ್ನು ತಗ್ಗಿಸಲು ಯೋಜನೆ ರೂಪಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು.
ಈಗಾಗಲೇ ಹಲವಾರು ಕೊಳವೆ ಬಾವಿಗಳಿಂದ ಸಮರ್ಪಕ ನೀರು ದೊರೆಯುತ್ತಿಲ್ಲ. ಇವುಗಳ ದುರಸ್ತಿಗೊಳಿಸುವುದರೊಂದಿಗೆ ಇನ್ನು ಕೆಲ ಕೊಳವೆ ಬಾವಿಗಳನ್ನು ಕೊರೆಸಲು ಮುಂದಾಗಬೇಕು. ಕುಡಿವ ನೀರಿನ ಸಮಸ್ಯೆಯನ್ನು ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪಟ್ಟಣದ ಸಾರ್ವಜನಿಕರಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಮುಖ್ಯಾಧಿಕಾರಿಗಳ ಪರವಾಗಿ ಪುರಸಭೆಯ ಸಿಬ್ಬಂದಿ ಸಿ.ಕೆ. ಕುಲಕರ್ಣಿಯವರು ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ನ ರಾಜ್ಯ ಯುವ ಕಾರ್ಯದರ್ಶಿ ಕಳಕಪ್ಪ ಕೊಡತಗೇರಿ, ತಾಲೂಕಾ ಪ್ರಧಾನ ಕಾರ್ಯದರ್ಶಿ ಉಮೇಶ ಮಲ್ಲಾಪುರ, ಅಲ್ಪಸಂಖ್ಯಾತರ ಅಧ್ಯಕ್ಷ ಮಕ್ತುಮ್ ಸಾಗರ, ಎಸ್.ಸಿ. ಘಟಕದ ಅಧ್ಯಕ್ಷ ಶರಣಪ್ಪ ಪೂಜಾರ, ನಗರ ಘಟಕ ಅಧ್ಯಕ್ಷ ಬಸವರಾಜ ಕೊಟಗಿ, ಚನ್ನಪ್ಪ ಮ್ಯಾಗೇರಿ, ರಾಜೇಸಾಬ ಹಣಗಿ, ಅಲ್ಲಾಬಕ್ಷ ಮುಚ್ಚಾಲಿ, ಸಂಗಪ್ಪ ಯಲಬುಣಚಿ, ಅಶೋಕ ಅಡವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.