ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಂಜುಂಡಪ್ಪ ವರದಿ: 28ರಂದು ಸಭೆ

Parashurama
Updated On : 12 Feb 2013, 11:56 am

ಗದಗ: ಡಾ. ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಫೆ. 28ರಂದು ವಿವಿಧ 27 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಡಾ. ನಂಜುಡಂಪ್ಪ ವರದಿ ಅನುಷ್ಠಾನ ಉನ್ನತಾಧಿಕಾರಿ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಶಿ ಹೇಳಿದರು. ಅವರು ಇತ್ತೀಚೆಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಅಭಿವೃದ್ಧಿಗಾಗಿ ಡಾ. ನಂಜುಂಡಪ್ಪ ಅವರು ನೀಡಿರುವ ವರದಿ ಅನುಷ್ಠಾನಗೊಳಿಸಿ 5 ವರ್ಷಗಳು ಗತಿಸಿವೆ. ಈ ಹಿನ್ನೆಲೆಯಲ್ಲಿ ವರದಿಯ ಅನುಷ್ಠಾನದ ಕುರಿತು ಮಾಹಿತಿ ಹಾಗೂ ಬರುವ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಈಗಾಗಲೇ ವರದಿಯಲ್ಲಿ ಗುರುತಿಸಿರುವಂತೆ 114 ತಾಲೂಕುಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತಿವರ್ಷ 2 ಸಾವಿರ ಕೋಟಿ ಹಣ ಖರ್ಚು ಮಾಡುತ್ತಿದೆ. ಬರುವ 3 ವರ್ಷಗಳಲ್ಲಿ ಮತ್ತಷ್ಟು ಹೆಚ್ಚಿನ ಅನುದಾನ ಒದಗಿಸಿ ವರದಿಯ ಸಂಪೂರ್ಣ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಡಾ. ನಂಜುಂಡಪ್ಪ ವರದಿಯಂತೆ ಜಿಲ್ಲೆಯ ಅತೀ ಹಿಂದುಳಿದ ಪ್ರದೇಶ ಮುಂಡರಗಿ ತಾಲೂಕು ಹಾಗೂ ಹಿಂದುಳಿದ ಶಿರಹಟ್ಟಿ ಮತ್ತು ರೋಣ ತಾಲೂಕಿನ ಅಭಿವೃದ್ಧಿಗಾಗಿ ಇದುವರೆಗೂ ರು. 16.30 ಕೋಟಿ ಖರ್ಚು ಮಾಡಲಾಗಿದೆ. 2007-08ರಲ್ಲಿ ಈ ಯೋಜನೆ ಅನುಷ್ಠಾನ ಮಾಡಿದ ಸರ್ಕಾರ ಗದಗ ಜಿಲ್ಲೆಯಲ್ಲಿ 15 ಇಲಾಖೆಗಳ ಮೂಲಕ ಉತ್ತಮ ಕೆಲಸ ನಿರ್ವಹಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀಕೃಷ್ಣಾ ಹೊಂಬಾಳಿ, ಜಿಪಂ ಉಪಕಾರ್ಯದರ್ಶಿ ಎನ್.ಆರ್. ಉಮೇಶ, ಟಿ. ದಿನೇಶ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments