ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು
ಯಲಬುರ್ಗಾ: ಸೇತುವೆಯಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ಪಟ್ಟಣದ ಕೊಪ್ಪಳ ರಸ್ತೆಗೆ ಹೊಂದಿಕೊಂಡಿರುವ ತಹಸೀಲ್ದಾರ್ ಕಚೇರಿ ಹತ್ತಿರ ನಡೆದಿದೆ. ಸಾವಿಗೀಡಾದ ವ್ಯಕ್ತಿಯನ್ನು ರೋಣ ತಾಲೂಕಿನ ತೋಟಗಂಟಿ ಗ್ರಾಮದ ನಿವಾಸಿ ರೇಣುಕನಗೌಡ ಯಲ್ಲಪ್ಪ ಬೂದಿಹಾಳ (60) ಎಂದು ಗುರುತಿಸಲಾಗಿದ್ದು, ಈತ ಕುಡಿದ ಅಮಲಿನಲ್ಲಿ ಸೇತುವೆ ಮೇಲೆ ಮಲಗಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಎಸ್.ಎಚ್. ಸತೀಶ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಂಟಂ-ಬೈಕ್ ಡಿಕ್ಕಿ: ಓರ್ವ ಸಾವು
ಗದಗ: ಟಂಟಂ-ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರೋಣ ತಾಲೂಕಿನ ಶಾಂತಗೇರಿ ಗ್ರಾಮದ ಬಳಿ ಸೋಮವಾರ ಜರುಗಿದೆ. ಮೃತನನ್ನು ಷಣ್ಮುಖಪ್ಪ ಇಟಗಿ (58) ಎಂದು ಗುರುತಿಸಲಾಗಿದ್ದು, ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಗದಗ: ಅಪರಿಚಿತ ವ್ಯಕ್ತಿಯೋರ್ವ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಗದಗದ ರೇಲ್ವೆ ನಿಲ್ದಾಣದಲ್ಲಿ ನಡೆದಿದೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಗದಗ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಜೀವ ಗಾಂಧಿ ಮಾನವ ಸೇವಾ ರಾಷ್ಟ್ರ ಪ್ರಶಸ್ತಿಗಾಗಿ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಲು ಫೆ. 21 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಟ್ಯಾಗೋರ ರಸ್ತೆ, ಗದಗ ದೂ-08372-250758 ಇಲ್ಲಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.